ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸುವರ್ಣ ನ್ಯೂಸ್ – ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲು

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ, ಮೀಡಿಯಾ

• 1 ನಿಮಿಷದ ಓದು

ಸುವರ್ಣ ನ್ಯೂಸ್ – ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲು

ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಖಾಸಗಿ ಸುದ್ದಿ ವಾಹಿನಿ ಸುವರ್ಣ ನ್ಯೂಸ್ ಮತ್ತು ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 505 (2) ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿದ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಚರ್ಚಾ ಕಾರ್ಯಕ್ರಮವೊಂದರಲ್ಲಿ ಭಾರತದ ಮುಸ್ಲಿಂ ಜನಸಂಖ್ಯೆಯನ್ನು ಪ್ರತಿನಿಧಿಸಲು ಪಾಕಿಸ್ತಾನದ ಧ್ವಜವನ್ನು ಬಳಸಿದ್ದಕ್ಕಾಗಿ ತನ್ವೀರ್ ಅಹ್ಮದ್ ಎಂಬವರು ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಜಿತ್ ಹನುಮಕ್ಕನವರ್ ಅವರು ನಿರೂಪಿಸಿದ, ಪ್ರಧಾನಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿದ ಜನಸಂಖ್ಯಾ ವರದಿ ಕುರಿತ ಚರ್ಚೆಯಲ್ಲಿ ಈ ಘಟನೆ ವರದಿಯಾಗಿದೆ. ಹಿಂದೂಗಳ ಜನಸಂಖ್ಯೆಯನ್ನು ಸೂಚಿಸಲು ಭಾರತೀಯ ಧ್ವಜವನ್ನು ಮತ್ತು ಮುಸ್ಲಿಂ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜವನ್ನು ಬಳಸಿರುವುದು ವಿವಾದವನ್ನು ಹುಟ್ಟುಹಾಕಿತ್ತು.

ಅಷ್ಟಕ್ಕೂ ಈ ಅಂಕಿ ಅಂಶದ ಮಾಹಿತಿ ಸರ್ಕಾರದ ಅಧಿಕೃತ ಮಾಹಿತಿಯಲ್ಲ, ಆರ್ಥಿಕ ಸಲಹಾ ಸಮಿತಿಯಲ್ಲಿರುವ ಸದಸ್ಯರೊಬ್ಬರ ಬರಹವಾಗಿದೆ. ಅಷ್ಟೆ ಅಲ್ಲದೇ ಈ ಬರಹಕ್ಕೂ ಸರ್ಕಾರಕ್ಕೂಸಂಬಂಧವಿಲ್ಲ ಎಂದೂ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಲೋಕಸಭಾ ಚುನಾವಣೆಯ ನಡುವೆ ಹಿಂದೂ ಜನಸಂಖ್ಯೆಯಲ್ಲಿ ಇಳಿಕೆ ಮತ್ತು ಮುಸ್ಲಿಂ ಜನಸಂಖ್ಯೆಯಲ್ಲಿ ಗಣನೀಯ ಹೆಚ್ಚಳವನ್ನು ಎತ್ತಿ ತೋರಿಸಿರುವ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯು ರಾಷ್ಟ್ರದಾದ್ಯಂತ ಚರ್ಚೆಗಳನ್ನು ಹುಟ್ಟುಹಾಕಿದೆ. ಪಾಪ್ಯುಲೇಶನ್ ಫೌಂಡೇಶನ್ ಆಫ್ ಇಂಡಿಯಾ (ಪಿಎಫ್‌ಐ) ನಂತರ ಈ ವಿಷಯದ ಕುರಿತು ಸಮುದಾಯಗಳ ನಡುವೆ ವಿಭಜನೆಯನ್ನು ಸೃಷ್ಟಿಸಲು ವರದಿಯಿಂದ ಮಾಧ್ಯಮಗಳಿಂದ ಸಂಖ್ಯೆಗಳನ್ನು ತಪ್ಪಾಗಿ ನಿರೂಪಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು