ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಬುರ್ಖಾಧಾರಿ ಮಹಿಳೆಯರ ಐಡಿ ಕಾರ್ಡ್‌ ಪರಿಶೀಲಿಸಿದ ಮಾಧವಿ ಲತಾ: ಆಯೋಗಕ್ಕೆ ದೂರು

PPeepal Media

Peepal Media ದೇಶ

• 1 ನಿಮಿಷದ ಓದು

ಬುರ್ಖಾಧಾರಿ ಮಹಿಳೆಯರ ಐಡಿ ಕಾರ್ಡ್‌ ಪರಿಶೀಲಿಸಿದ ಮಾಧವಿ ಲತಾ: ಆಯೋಗಕ್ಕೆ ದೂರು

 ಹೈದರಾಬಾದ್: ಬಿಜೆಪಿಯ ಹೈದರಾಬಾದ್‌ ಲೋಕಸಭಾ ಅಭ್ಯರ್ಥಿ ಕೆ ಮಾಧವಿ ಲತಾ ಅವರು ಮತಗಟ್ಟೆಯೊಂದರಲ್ಲಿ ಬುರ್ಖಾಧಾರಿ  ಮುಸ್ಲಿಂ ಮಹಿಳೆಯರ ಐಡಿ ಕಾರ್ಡ್‌ ಪರಿಶೀಲಿಸುವ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.

 ಮುಸ್ಲಿಂ ಮಹಿಳೆಯರ ಅವರ ಶಿರವಸ್ತ್ರ ತೆಗೆದು ಮುಖ ತೋರಿಸುವಂತೆ ಹೇಳುತ್ತಿರುವ ವೀಡಿಯೋವೊಂದು  ಸೋಮವಾರ ಬೆಳಗ್ಗೆಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.  ಮಾಧವಿಲತಾ ಅವರ ಈ ನಡೆಯನ್ನು ಪ್ರಶ್ನಿಸಿ ಎಐಎಂಐಎಂ ಅಧ್ಯಕ್ಷ ಹಾಗೂ ಪಕ್ಷದ ಅಭ್ಯರ್ಥಿ ಅಸಾದುದ್ದೀನ್‌ ಓವೈಸಿ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ಅಮೃತ ವಿದ್ಯಾಲಯದಲ್ಲಿ ತಮ್ಮ ಮತದಾನಗೈದ ನಂತರ ಮಾಧವಿ ಲತಾ ಹಲವು ಮತಗಟ್ಟೆಗಳಿಗೆ ಭೇಟಿ ನೀಡಿದ್ದರು. ಆಝಂಪುರ್‌ ಎಂಬಲ್ಲಿನ ಮತಗಟ್ಟೆಯಲ್ಲಿ ಆಕೆ ಮತದಾನಕ್ಕೆ ಕಾದಿದ್ದ ಮಹಿಳೆಯರ ಐಡಿ ಕಾರ್ಡ್‌ ಪರಿಶೀಲಿಸಿ ಬುರ್ಖಾಧಾರಿ ಮಹಿಳೆಯರಿಗೆ ಮುಖ ತೋರಿಸುವಂತೆ ಹೇಳುವುದು ಹಾಗೂ ಅವರು ಅಂತೆಯೇ ಮಾಡುವುದು ವೀಡಿಯೋದಲ್ಲಿ ಕಾಣಿಸುತ್ತದೆ.

ಐಡಿ ಕಾರ್ಡ್‌ಗಳನ್ನು ಸರಿಯಾಗಿ ಪರಿಶೀಲಿಸಿದ ನಂತರವೇ ಮತದಾನಕ್ಕೆ ಅನುಮತಿಸಬೇಕೆಂದೂ ಅವರು ಚುನಾವಣಾಧಿಕಾರಿಗಳಿಗೆ ಸೂಚಿಸುವುದು ಕಾಣಿಸುತ್ತದೆ. ಮತದಾರರ ಪಟ್ಟಿಯಲ್ಲಿ ಹಲವು ನ್ಯೂನತೆಗಳಿಗೆ ಹಲವು ಮತದಾರರ ಹೆಸರುಗಳು ಕಾಣೆಯಾಗಿವೆ ಎಂದೂ ಆಕೆ ಹೇಳುತ್ತಿರುವುದು ಕಂಡು ಬಂದಿದೆ.  

ಇತ್ತೀಚೆಗೆ ಮಾಧವಿಲತಾ ಅವರು ರಾಮ ನವಮಿ ರ‍್ಯಾಲಿ ಸಂದರ್ಭ ಮಸೀದಿಯತ್ತ ಬಿಲ್ಲು ಬಾಣ ಪ್ರಯೋಗಿಸುವ ಸನ್ನೆ ಮಾಡುವ ಮೂಲಕ ವಿವಾದಕ್ಕೀಡಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು