ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮುಂಬಯಿ ಜಾಹೀರಾತು ಫಲಕ ಕುಸಿತ ಪ್ರಕರಣ: 14ಕ್ಕೆ ಏರಿದ ಸಾವಿನ ಸಂಖ್ಯೆ, ಜಾಹೀರಾತು ಏಜೆನ್ಸಿ ವಿರುದ್ಧ ಪ್ರಕರಣ ದಾಖಲು

PPeepal Media Desk

Peepal Media Desk ದೇಶ

• 1 ನಿಮಿಷದ ಓದು

ಮುಂಬಯಿ ಜಾಹೀರಾತು ಫಲಕ ಕುಸಿತ ಪ್ರಕರಣ: 14ಕ್ಕೆ ಏರಿದ ಸಾವಿನ ಸಂಖ್ಯೆ, ಜಾಹೀರಾತು ಏಜೆನ್ಸಿ ವಿರುದ್ಧ ಪ್ರಕರಣ ದಾಖಲು

ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿತದ ಘಟನೆಯಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿದೆ ಮತ್ತು 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ತಿಳಿಸಿದ್ದಾರೆ.

ಸೋಮವಾರ ಮುಂಬೈಯಲ್ಲಿ ಬೀಸಿದ ಬಿರುಗಾಳಿ ಮತ್ತು ಅಕಾಲಿಕ ಮಳೆಯ ಸಂದರ್ಭದಲ್ಲಿ ಘಾಟ್‌ಕೋಪರ್‌ ಬಳಿಯ ಪೆಟ್ರೋಲ್ ಪಂಪ್‌ ಒಂದರಲ್ಲಿದ್ದ 100 ಅಡಿ ಎತ್ತರದ ಅಕ್ರಮ ಜಾಹೀರಾತು ಫಲಕ ಬಿದ್ದಿದೆ.

ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಅಧಿಕಾರಿಗಳ ಪ್ರಕಾರ, ಛೇಡಾ ನಗರ ಮೂಲದ ಪೆಟ್ರೋಲ್ ಪಂಪ್‌ನಲ್ಲಿ ಇನ್ನೂ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಅಪಘಾತದ ಸ್ಥಳದಿಂದ ರಕ್ಷಿಸಲ್ಪಟ್ಟ 74 ಜನರಲ್ಲಿ 31 ಜನರನ್ನು ರಾಜವಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು 35 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಏತನ್ಮಧ್ಯೆ, ಇನ್ನೂ ಎಂಟು ಗಾಯಾಳುಗಳು ಮೂರು ಖಾಸಗಿ ಮತ್ತು ಸಿವಿಲ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ನಡುವೆ ಮುಂಬೈನ ವಡಾಲಾ ಪ್ರದೇಶದಲ್ಲಿ ಸೋಮವಾರ ರಭಸವಾಗಿ ಗಾಳಿ ಮತ್ತು ಮಳೆಯ ನಡುವೆ ನಿರ್ಮಾಣ ಹಂತದಲ್ಲಿದ್ದ ಲೋಹದ ಪಾರ್ಕಿಂಗ್ ಟವರ್ ರಸ್ತೆಯ ಮೇಲೆ ಕುಸಿದಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಕನಿಷ್ಠ ಎಂಟರಿಂದ ಹತ್ತು ವಾಹನಗಳು ಜಖಂಗೊಂಡಿವೆ. ಸಂಜೆ 4 ಗಂಟೆಯ ನಂತರ ಜನನಿಬಿಡ ವಡಾಲಾ-ಆಂಟಾಪ್ ಹಿಲ್ ರಸ್ತೆಯ ಬರ್ಕತ್ ಅಲಿ ನಾಕಾದ ಶ್ರೀಜಿ ಟವರ್ ಬಳಿ ಈ ಘಟನೆ ಸಂಭವಿಸಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿರ್ಮಾಣ ಹಂತದಲ್ಲಿರುವ ಬಹುಮಹಡಿ ಮೆಟಲ್ ಪಾರ್ಕಿಂಗ್ ಟವರ್ ಜನನಿಬಿಡ ರಸ್ತೆಯಲ್ಲಿ ಕುಸಿಯುತ್ತಿರುವುದನ್ನು ತೋರಿಸುತ್ತದೆ. ಘಟನೆಯಲ್ಲಿ ರಸ್ತೆ ಬದಿ ನಿಲ್ಲಿಸಿದ್ದ 8 ರಿಂದ 10 ವಾಹನಗಳು ಜಖಂಗೊಂಡಿವೆ ಎಂದು ಪೌರಾಯುಕ್ತರೊಬ್ಬರು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು