ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪರಿಷತ್‌ ಚುನಾವಣೆ: ಬಂಡಾಯದ ಬಿಸಿಗೆ ಮುದುಡುತ್ತಿದೆ ಕರಾವಳಿಯ ತಾವರೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಪರಿಷತ್‌ ಚುನಾವಣೆ: ಬಂಡಾಯದ ಬಿಸಿಗೆ ಮುದುಡುತ್ತಿದೆ ಕರಾವಳಿಯ ತಾವರೆ

ಪರಿಷತ್‌ ಚುನಾವಣೆಯ ಹೊಸ್ತಿಲಿನಲ್ಲಿ ಕರಾವಳಿ ಭಾಗದ ಬಿಜೆಪಿಯಲ್ಲಿ ಬಂಡಾಯದ ಹೊಗೆ ಏಳುತ್ತಿದ್ದು ಪಕ್ಷದ ನಾಯಕರ ಉಸಿರುಗಟ್ಟಿಸುತ್ತಿದೆ. ಲೋಕಸಭಾ ಚುನಾವಣೆಯ ಸಮಯದಲ್ಲಿನ ಬಂಡಾಯವನ್ನೇ ತಣಿಸಲಾಗದೆ ಕೈಚೆಲ್ಲಿ ಕುಳಿತಿರುವ ಬಿಜೆಪಿ ನಾಯಕತ್ವಕ್ಕೆ ಈಗ ಪದವೀಧರ ಕ್ಷೇತ್ರಗಳ ಚುನಾವಣೆ ಇನ್ನೊಂದು ತಲೆನೋವನ್ನು ತಂದೊಡ್ಡಿದೆ.

ವಿಧಾನಪರಿಷತ್​​​ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಇದೇ ಜೂನ್ 3ರಂದು ಮತದಾನ ನಡೆಯಲಿದೆ. ಈ ಚುನಾವಣೆಗಾಗಿ ಬಿಜೆಪಿ ಈಗಾಗಲೇ 4 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಇನ್ನುಳಿದ ಎರಡು ಕ್ಷೇತ್ರಗಳನ್ನು ತನ್ನ ಮಿತ್ರ ಪಕ್ಷ ಜೆಡಿಎಸ್​​ಗೆ ಬಿಟ್ಟುಕೊಟ್ಟಿದೆ. 

ಆದರೆ ಈಗ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು ಎರಡು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿಯನ್ನು ಅದು ಎದುರಿಸುತ್ತಿದೆ. ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಬಯಸಿದ್ದ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರವಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ. ಅತ್ತ ನೈರುತ್ಯ ಶಿಕ್ಷಕ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದ ಮಂಗಳೂರಿನ ಆರ್​ಎಸ್​ಎಸ್​ ಮುಖಂಡ ಎಸ್ ಆರ್ ಹರೀಶ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರಾಗಿರುವ ಎಸ್ ಆರ್ ಹರೀಶ್ ಎಬಿವಿಪಿ ಹಿನ್ನೆಲೆಯಿಂದ ಬಂದವರು.

ಕಳೆದ ಬಾರಿ ಉಡುಪಿಯಿಂದ ಶಾಸಕ ಸ್ಥಾನದ ಟಿಕೆಟ್‌ ತಪ್ಪಿಸಿಕೊಂಡಿದ್ದ ರಘುಪತಿ ಭಟ್‌ ತಾನು ನಾಮ ಪತ್ರ ಸಲ್ಲಿಸುವುದು ಗ್ಯಾರಂಟಿ ಎಂದಿದ್ದಾರೆ.

ಬಿಜೆಪಿಯ ಬಣ ರಾಜಕೀಯವು ಪ್ರತಿ ಚುನಾವಣೆಯಲ್ಲೂ ಎದ್ದು ಕಾಣುತ್ತಿದ್ದು, ಒಂದೊಂದು ಚುನಾವಣೆಯಲ್ಲಿ ಒಂದೊಂದು ಬಣದ ಕೈ ಮೇಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣ ಲಾಬಿ ಕೈ ಮೇಲಾಗಿತ್ತು ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತ್ರತ್ವದ ಲಿಂಗಾಯತ ಬಣ ಮೇಲುಗೈ ಸಾಧಿಸಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು