Sunday, June 16, 2024

ಸತ್ಯ | ನ್ಯಾಯ |ಧರ್ಮ

ಅಂಬಾನಿ – ಅದಾನಿ | ನಾನು ಅಪ್ರಾಮಾಣಿಕತೆ ತೋರಿಸಿದ್ದಲ್ಲಿ ನನ್ನನ್ನು ಗಲ್ಲಿಗೇರಿಸಿ – ಮೋದಿ

ಹೊಸದೆಹಲಿ: ದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದರು.

ಈ ಬಗ್ಗೆ ಮಾತನಾಡಿದ ಪ್ರಧಾನಿ, “ಜವಾಹರಲಾಲ್ ನೆಹರೂ ಅವರ ಸರ್ಕಾರವನ್ನು ಸಂಸತ್ತಿನಲ್ಲಿ ಬಿರ್ಲಾ-ಟಾಟಾ ಕಿ ಸರ್ಕಾರ್ ಎಂದು ಕರೆಯಲಾಗುತ್ತಿತ್ತು. ಈಗ ಈ ಕುಟುಂಬದ (ಗಾಂಧಿ) ಬಯಕೆಯೆಂದರೆ ನಾನು ಸಹ ಅಂತಹದ್ದೇ ನಿಂದನೆಗಳನ್ನು ಎದುರಿಸಬೇಕೆನ್ನುವದು. ದೇಶಕ್ಕಾಗಿ ಸಂಪತ್ತು ಸೃಷ್ಟಿಸುವವರನ್ನು ಗೌರವಿಸಬೇಕು ಎಂದು ಹೇಳಲು ನನಗೆ ಯಾವುದೇ ನಾಚಿಕೆಯಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

“ಆಗಸ್ಟ್ 15ರ ಕಾರ್ಯಕ್ರಮದ ಅತಿಥಿಗಳ ಪಟ್ಟಿಯಲ್ಲಿ ನಾನು ಕ್ರೀಡಾಪಟುಗಳು ಮತ್ತು ಸಾಧಕರ ಹೆಸರುಗಳನ್ನು ಸೇರಿಸುತ್ತೇನೆ. ದೇಶವು ತನ್ನ ಸಾಧಕರನ್ನು ಪೂಜಿಸದಿದ್ದರೆ ಮತ್ತು ಗೌರವಿಸದಿದ್ದರೆ, ವಿಜ್ಞಾನಿಗಳಾಗುವ ಮತ್ತು ಪಿಎಚ್ಡಿ ಮಾಡುವ ಜನರನ್ನು ನಾವು ಹೇಗೆ ಪಡೆಯುತ್ತೇವೆ? ಎಲ್ಲಾ ವರ್ಗದ ಸಾಧಕರನ್ನು ಗೌರವಿಸಬೇಕು” ಎಂದು ಅವರು ಹೇಳಿದರು.

“ನಾನು ಅಪ್ರಾಮಾಣಿಕತೆ ತೋರಿಸಿದ್ದರೆ ನನ್ನನ್ನು ಗಲ್ಲಿಗೇರಿಸಲೇಬೇಕು. ನಾನು ತಪ್ಪು ರೀತಿಯಲ್ಲಿ (ಯಾರಿಗಾದರೂ ಪ್ರಯೋಜನ) ಮಾಡಿ ಕೊಟ್ಟಿದ್ದರೆ, ನನ್ನನ್ನು ಗಲ್ಲಿಗೇರಿಸಬೇಕು. ಆದರೆ ನನ್ನ ದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ನಾನು ಗೌರವಿಸುತ್ತೇನೆ” ಎಂದು ಪ್ರಧಾನಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು