Friday, June 14, 2024

ಸತ್ಯ | ನ್ಯಾಯ |ಧರ್ಮ

“ಪೋಲ್‌ಹೌಸ್‌ ಕರ್ನಾಟಕ” ಚುನಾವಣಾ ಸಮೀಕ್ಷೆ ; ಕಾಂಗ್ರೆಸ್ ನದ್ದೇ ಮೇಲುಗೈ

7 ಹಂತಗಳ ಲೋಕಸಭಾ ಚುನಾವಣೆ ಇಂದು ಮುಕ್ತಾಯವಾಗಿದ್ದು ಕೊನೆಯ ಹಂತದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 904 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆ ಬರೆದಿದ್ದಾರೆ. ಇತ್ತ ಕರ್ನಾಟಕವನ್ನೇ ಕೇಂದ್ರೀಕರಿಸಿ ನಡೆಸಿದ “ಪೋಲ್ ಹೌಸ್ ಕರ್ನಾಟಕ” ಪೊಲಿಟಿಕಲ್ ಕಂಸಲ್ಟೆನ್ಸಿ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದ ನಗೆ ಬೀರಿದೆ.

ಕನ್ನಡಿಗರಿಂದಲೇ ನಡೆಸಲ್ಪಡುತ್ತಿರುವ ಪೋಲ್‌ಹೌಸ್‌ ಪೊಲಿಟಿಕಲ್‌ ಕನ್ಸಲ್ಟೆನ್ಸಿ ಕೂಡ ಎಕ್ಸಿಟ್‌ ಪೋಲ್‌ ಸಮೀಕ್ಷೆಯ ಪ್ರಕಾರ ರಾಜ್ಯ ವಿಧಾನಸಭೆ ಚುನಾವಣೆಯ ಗೆಲುವನ್ನೇ ಕಾಂಗ್ರೆಸ್ ಪಕ್ಷ ಮುಂದೆ ಕಾಯ್ದುಕೊಂಡು ಬಂದಿದೆ ಎಂಬ ವರದಿ ನೀಡಿದೆ.

ಎಕ್ಸಿಟ್ ಪೋಲ್ ಸರ್ವೇ ಆದರಿಸಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 16 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲುವ ಸಾಧ್ಯತೆಯಿದ್ದರೆ, ಎನ್‌ಡಿಎ 12 ಕ್ಷೇತ್ರಗಳಲ್ಲಿ ಗೆಲ್ಲಲಿದೆ.  ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್‌, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಹಾಸನ, ಕೋಲಾರ, ಕೊಪ್ಪಳ, ರಾಯಚೂರು, ತುಮಕೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ.

ಬೆಂಗಳೂರು ಸೆಂಟ್ರಲ್‌, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕೋಡಿ, ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಮೈಸೂರು, ಶಿವಮೊಗ್ಗ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಹಾಗೂ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಲಿದೆ ಎಂದು ಸಮೀಕ್ಷೆಯ ವರದಿಯಿಂದ ತಿಳಿದು ಬಂದಿದೆ.

ಪೋಲ್‌ಹೌಸ್‌ ಸಂಸ್ಥೆಯ ಈ ಎಕ್ಸಿಟ್‌ ಪೋಲ್‌ ಸಮೀಕ್ಷಾ ವರದಿ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ತದ್ವಿರುದ್ಧವಾಗಿದೆ. ಕಳೆದ ಬಾರಿ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ ಬಿಜೆಪಿ 25, ಕಾಂಗ್ರೆಸ್‌  1, ಜೆಡಿಎಸ್‌  1, ಪಕ್ಷೇತರ ಅಭ್ಯರ್ಥಿ 1 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ದರು.

Related Articles

ಇತ್ತೀಚಿನ ಸುದ್ದಿಗಳು