Monday, June 17, 2024

ಸತ್ಯ | ನ್ಯಾಯ |ಧರ್ಮ

ನೀಟ್‌ ಅಕ್ರಮ ಒಪ್ಪಿಕೊಂಡ ಕೇಂದ್ರ

ಹೊಸದಿಲ್ಲಿ: ನೀಟ್ ಪರೀಕ್ಷೆಯಲ್ಲಿ ಕೆಲ ಅವ್ಯವಹಾರ ನಡೆದಿರುವುದನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಥಮ ಬಾರಿಗೆ ಒಪ್ಪಿಕೊಂಡಿದ್ದಾರೆ.

ಮಾಧ್ಯಮ ಸಂಸ್ಥೆಗೆ ಭಾನುವಾರ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಎರಡು ಕಡೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಭರವಸೆ ನೀಡಿದರು. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಗೆ ಸಾಕಷ್ಟು ಸುಧಾರಣೆ ಅಗತ್ಯವಿದೆ ಎಂದು ಸಚಿವರು ಒಪ್ಪಿಕೊಂಡರು.

ತಪ್ಪಿತಸ್ಥರಲ್ಲಿ ಯಾರನ್ನೂ ಬಿಡುವುದಿಲ್ಲ ಎಂದು ಎನ್‌ಟಿಎ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಈ ವಿಚಾರದಲ್ಲಿ ಸರಕಾರ ಗಂಭೀರವಾಗಿದ್ದು, ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದರು. ಸುಪ್ರೀಂ ಕೋರ್ಟ್‌ನ ಶಿಫಾರಸುಗಳ ಪ್ರಕಾರ, 1,563 ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸಲು ಆದೇಶವನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು