Monday, July 1, 2024

ಸತ್ಯ | ನ್ಯಾಯ |ಧರ್ಮ

ಸನಾತನ ಧರ್ಮ ವಿವಾದ: ಇಂದು ಬೆಂಗಳೂರು ನ್ಯಾಯಾಲಯದಲ್ಲಿ ಹಾಜರಾಗಲಿರುವ ಉದಯನಿಧಿ ಸ್ಟಾಲಿನ್

ಬೆಂಗಳೂರು/ಚೆನ್ನೈ: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗಾಗಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಮಂಗಳವಾರ ಬೆಂಗಳೂರು ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು.

ಮೂಲಗಳ ಪ್ರಕಾರ, ಸೋಮವಾರ ರಾತ್ರಿ ಉದಯನಿಧಿ ಬೆಂಗಳೂರಿಗೆ ತೆರಳಿದ್ದಾರೆ.

ಕ್ರೀಡಾ ಮತ್ತು ಯುವ ಕಲ್ಯಾಣ ಖಾತೆಯನ್ನು ಹೊಂದಿರುವ ಉದಯನಿಧಿ ಅವರು ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಅವರ ಪುತ್ರ.

2023ರ ಸೆಪ್ಟೆಂಬರ್‌ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

Related Articles

ಇತ್ತೀಚಿನ ಸುದ್ದಿಗಳು