Wednesday, June 26, 2024

ಸತ್ಯ | ನ್ಯಾಯ |ಧರ್ಮ

ತುರ್ತು ಪರಿಸ್ಥಿತಿ ಸಮಯದಲ್ಲಿ ಮೋದಿ ಯಾವ ಹೋರಾಟವನ್ನೂ ಮಾಡಿಲ್ಲ: ಸುಬ್ರಮಣಿಯನ್‌ ಸ್ವಾಮಿ

ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ ಮಂಗಳವಾರ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿಯದು ಅರ್ಹತೆ ಇಲ್ಲದಿದ್ದರೂ ಕ್ರೆಡಿಟ್ ತೆಗೆದುಕೊಳ್ಳುವ ಪ್ರವೃತ್ತಿ ಎಂದು ಕುಟುಕಿದ್ದಾರೆ.

“ಮೋದಿ ಅವರು ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಡುವಲ್ಲಿ ಯಾವುದೇ ಪಾತ್ರವನ್ನು ವಹಿಸಿಲ್ಲ. ಅವರು ಆಗ ಗುಜರಾತ್‌ನಲ್ಲಿ ಆರ್‌ಎಸ್‌ಎಸ್ ಪ್ರಚಾರಕರಾಗಿದ್ದರು, ಅಲ್ಲಿ ಬಾಬುಭಾಯ್ ನೇತೃತ್ವದ ಜನತಾ ಮೋರ್ಚಾದ ಸರ್ಕಾರವಿತ್ತು. ಹೀಗಾಗಿ ಅಲ್ಲಿ ತುರ್ತು ಪರಿಸ್ಥಿತಿ ಇರಲಿಲ್ಲ. ಅವರಿಗೆ ತಾನು ಮಾಡದಿರುವ ಕೆಲಸಕ್ಕೂ ಕ್ರೆಡಿಟ್‌ ತೆಗೆದುಕೊಳ್ಳುವ ಅಭ್ಯಾಸ ಮೊದಲಿನಿಂದಲೂ ಇದೆ.” ಎಂದು ಸ್ವಾಮಿ ತಮ್ಮ X ಖಾತೆಯಲ್ಲಿ ಬರೆದಿದ್ದಾರೆ

25 ಜೂನ್ 1975ರಂದು ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಹೇರಿದ ತುರ್ತು ಪರಿಸ್ಥಿತಿಯ 50ನೇ ವರ್ಷದ ಸಂದರ್ಭದಲ್ಲಿ ಸ್ವಾಮಿ ಈ ದಾಳಿ ನಡೆಸಿದ್ದಾರೆ.

ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ತುರ್ತು ಪರಿಸ್ಥಿತಿಯ ಕುರಿತು ಮನಸೋ ಇಚ್ಛೆ ಹೇಳಿಕೆ ನೀಡುತ್ತಾ ಕಾಂಗ್ರೆಸ್‌ ಪಕ್ಷವನ್ನನು ಟೀಕಿಸುತ್ತಿದ್ದಾರೆ. ಮೊನ್ನೆ ಸದನದಲ್ಲೂ ಈ ಕುರಿತು ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಸುಬ್ರಮಣಿಯನ್‌ ಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು