ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ: ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜಕೀಯ

• 1 ನಿಮಿಷದ ಓದು

ದಿನವೊಂದಕ್ಕೆ 1ಕೋಟಿ ಲೀ.ಹಾಲು ಉತ್ಪಾದನೆ: ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಜುಲೈ -02: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ಅವರು ಇಂದು KMF ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ ಸಂಗ್ರಹದ ಸಂಭ್ರಮಾಚರಣೆಯ ಅಂಗವಾಗಿ ಗೋ ಮಾತೆಗೆ ಪೂಜೆ ಸಲ್ಲಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕರ್ನಾಟಕದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷ ಜೂನ್ ಮಾಹೆಯಲ್ಲಿ ದಿನವೊಂದಕ್ಕೆ 90 ಲಕ್ಷ ಲೀ.ಇತ್ತು ಎಂದರು.

ಹಾಲಿನ ಸೊಸೈಟಿಗಳು ರೈತರ ಸಂಘಟನೆ
ಹಿಂದೆ ಅವರು ಪಶುಸಂಗೋಪನಾ ಇಲಾಖೆ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳಿಗೆ ಡೈರಿಯನ್ನು ಹಸ್ತಾಂತರ ಮಾಡಿಕೊಟ್ಟಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಅಲ್ಲಿಯವರೆಗೂ ಡೈರಿಗಳು ಹಾಗೂ ಹಾಲು ಒಕ್ಕೂಟಗಳು ಪ್ರತ್ಯೇಕವಾಗಿದ್ದವು. ಹಾಲಿನ ಸೊಸೈಟಿಗಳೂ ಕೂಡ ರೈತರ ಸಂಘಟನೆಗಳೇ ಆಗಿವೆ ಎಂದರು.

ರೈತರಿಗೆ ನೆರವು
ರಾಜ್ಯದಲ್ಲಿ ಸುಮಾರು 16000 ಸೊಸೈಟಿಗಳಿದ್ದು, 15 ಹಾಲು ಒಕ್ಕೂಟಗಳಿವೆ. ಕೆಲವೆಡೆ ಎರಡು ಮೂರು ಜಿಲ್ಲೆ ಸೇರಿ ಒಕ್ಕೂಟ ಮಾಡಿಕೊಂಡಿದ್ದಾರೆ. 15 ಮದರ್ ಡೈರಿಗಳಿವೆ. ಒಂದು ಕೋಟಿ ಹಾಲು ಉತ್ಪಾದನೆಯಾಗುತ್ತಿರುವುದರಿಂದ ಅರ್ಧ ಲೀ ಹಾಲಿನ ಪ್ಯಾಕೆಟ್ ನಲ್ಲಿ 50 ಮೀ.ಲೀ ಹಾಲು ಹೆಚ್ಚು ಮಾಡಲಾಗಿದೆ. ಇಷ್ಟು ಹಾಲನ್ನು ಮಾರಾಟ ಮಾಡಬೇಕಿದೆ. ನಾವು ರೈತರಿಗೆ ಹಾಗೂ ಸೊಸೈಟಿಗಳಿಗೆ ಹಾಲು ಬೇಡ ಎನ್ನಲಾಗುವುದಿಲ್ಲ. ರೈತರಿಗೆ ಸಹಾಯ ಮಾಡಲು ನಂದಿನಿ ಹಾಲಿನ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಹೆಚ್ಚಾಗಿರುವ ಪ್ರಮಾಣಕ್ಕೆ 2.00 ರೂಪಾಯಿ ಹೆಚ್ಚಿಸಲಾಗಿದೆ ಎಂದರು.

ವಿಪಕ್ಷದ ಅಪಪ್ರಚಾರ

ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳದೆ ಹಾಲಿನ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಹೇಳಿ ಅಪಪ್ರಚಾರ ಮಾಡುತ್ತಿದ್ದಾರೆ. ರೈತರ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಅನಿಸುತ್ತಿದೆ. ಹಾಲು ಉತ್ಪಾದನೆ ಹೆಚ್ಚಾದರೆ ಹೆಚ್ಚು ಆದಾಯ ಬರಲಿದೆ. ಒಂದು ಕೋಟಿ ಲೀ. ಉತ್ಪಾದನೆಯಾದರೆ ಒಂದು ದಿನಕ್ಕೆ 5 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಕೊಡುತ್ತದೆ. ಒಂದು ತಿಂಗಳಿಗೆ 150 ಕೋಟಿ, ವರ್ಷಕ್ಕೆ 1800ಕೋಟಿ ರೂ.ಗಳನ್ನು ನೀಡಿ ರೈತರಿಗೆ ಸಹಾಯ ಮಾಡಲಾಗುತ್ತಿದೆ ಎಂದರು.

2.00 ರೂ.ಇದ್ದ ಪ್ರೋತ್ಸಾಹಧನವನ್ನು 5 ರೂ. ಮಾಡಿದವನು ನಾನು. ವಿರೋಧಪಕ್ಷದ ನಾಯಕ ಆರ್.ಅಶೋಕ್ ಅವರಿಗೆ ಈ ಬಗ್ಗೆ ತಿಳಿಯದೆ ಮಾತನಾಡುತ್ತಾರೆ ಎಂದರು.

ಹಾಲಿನ ದರ ಹೆಚ್ಚಳವಾಗಿಲ್ಲ
ಒಂದು ವೇಳೆ ಹಾಲಿನ ಬೆಲೆ ಹೆಚ್ಚಾದರೂ ಕೊಳ್ಳುವವರಿಗೆ ಅದು ಭಾರವಾಗುತ್ತದೆ. ರೈತರಿಗೆ ಭಾರವಾಗುವುದಿಲ್ಲ, ಸಹಾಯವಾಗುತ್ತದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ ಎಂದು ಪುನರುಚ್ಚರಿಸಿದ ಮುಖ್ಯಮಂತ್ರಿಗಳು .
ಗ್ರಾಹಕರಿಗೆ
ಪ್ರಮಾಣ ಹೆಚ್ಚು ಮಾಡಿ ಬೆಲೆ ನಿಗದಿ ಮಾಡಿದ್ದರೂ ಕೂಡ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಹಾಲಿನ ಬೆಲೆ ಕಡಿಮೆ ಇದೆ. ಎಲ್ಲಾ ರಾಜ್ಯಗಳಿಗೆ ಹೋಲಿಸಿದರೆ ಗ್ರಾಹಕರಿಗೆ ಕಡಿಮೆ ದರದಲ್ಲಿ ಹಾಲು ಕೊಡುತ್ತಿರುವುದು ಕರ್ನಾಟಕ ಮಾತ್ರ ಎಂದರು.

PPeepal Media

Peepal Media

Peepal Media · ರಾಜಕೀಯ ವಿಭಾಗ

ಸಂಬಂಧಿತ ಸುದ್ದಿಗಳು