ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮುಡಾ ಪ್ರಕರಣ | ತನಿಖಾ ವರದಿ ಬಂದ ನಂತರ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮುಡಾ ಪ್ರಕರಣ | ತನಿಖಾ ವರದಿ ಬಂದ ನಂತರ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜುಲೈ 03: ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗ ಆಗಿದೆಯೋ ಇಲ್ಲವೋ ಎಂದು ಪತ್ತೆ ಹಚ್ಚಲು ತನಿಖೆ ಮಾಡಲಾಗುತ್ತಿದ್ದು ಎಲ್ಲಾ ನಿವೇಶನಗಳನ್ನು ಅಮಾನತ್ತಿನಲ್ಲಿ ಇಡಲಾಗಿದೆ. ಹಾಗಾಗಿ ಸರ್ಕಾರಕ್ಕೆ ನಷ್ಟವಾಗಿಲ್ಲ. ನಿವೇಶನಗಳನ್ನು ಹಂಚಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಹಿರಿಯ ಐಎಎಸ್ ಅಧಿಕಾರಿಗಳಿಂದ ತನಿಖೆ ಮಾಡಿಸಲಾಗುತ್ತಿದೆ. ವರದಿ ಬಂದ ನಂತರ ತೀರ್ಮಾನ ಈ ಬಗ್ಗೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಡಾ ನಿವೇಶನ ಹಂಚಿಕೆಯಲ್ಲಿ ದುರುಪಯೋಗವಾಗಿದೆ ಎಂದು ಬಿಜೆಪಿ ಆರೋಪ ಮಾಡಿದ್ದು ಸಿಬಿಐ ಗೆ ಪ್ರಕರಣ ಹಸ್ತಾಂತರ ಮಾಡಲು ಒತ್ತಾಯಿಸಿರುವ ಬಗ್ಗೆ ಮಾತನಾಡಿ ಎಲ್ಲವನ್ನೂ ಸಿಬಿಐ ಗೆ ಹಸ್ತಾಂತರಿಸಲು ಏಕೆ ಹೇಳುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿದ್ದರು ಎಂದು ಪ್ರಶ್ನಿಸಿದರು. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇಕೆಂದು ಬಿಜೆಪಿಯೇ ಕಾನೂನು ಮಾಡಿದೆ ಎಂದರು.

ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪ್ರಕರಣದಲ್ಲಿ ನನ್ನ ಪಾತ್ರವೇನಿದೆ ಎಂದು ಪ್ರಶ್ನಿಸಿದರು. ಆರ್. ಅಶೋಕ್ ಕರ್ತವ್ಯ ಲೋಪವೆಸಗಿದ್ದಾರೆ ಎಂದರೆ ರಾಜಿನಾಮೆ ಕೊಡುತ್ತಾರೆಯೇ ಎಂದು ಪ್ರಶ್ನಿಸಿದರು. ಅವರ ಕಾಲದಲ್ಲಿ ಅಕ್ರಮ ಸಕ್ರಮ ಸರಿಯಾದ ರೀತಿಯಲ್ಲಿ ಆಗಿಲ್ಲ ಎಂದು ಆರೋಪ ಕೇಳಿ ಬಂದಾಗ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜಿನಾಮೆ ಕೊಡಿ ಅಂದರೆ ಕೊಡುತ್ತಾರೆಯೇ ಎಂದರು.

ವಾಲ್ಮೀಕಿ ನಿಗಮದ ಅಕ್ರಮಗಳ ಬಗ್ಗೆ ತನಿಖೆ
ಬಿಜೆಪಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮಗಳ ಬಗ್ಗೆಯೂ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ ವಾಲ್ಮೀಕಿ ನಿಗಮದ ಪ್ರಕರಣವನ್ನು ಎಸ್‍ಐಟಿ ಗೆ ವಹಿಸಲಾಗಿದ್ದು ತನಿಖೆ ನಡೆಯುತ್ತಿದೆ. ಸಚಿವರಾಗಿದ್ದ ನಾಗೇಂದ್ರ ಅವರಿಂದ ರಾಜಿನಾಮೆ ಪಡೆಯಲಾಗಿದೆ. ಡೆತ್ ನೋಟಿನಲ್ಲಿ ಮಂತ್ರಿಗಳು ವ್ಯವಸ್ಥಾಪಕ ನಿರ್ದೇಶಕರಿಗೆ ಮೌಖಿಕ ಆದೇಶ ನೀಡಿದ್ದರು ಎಂದು ಬರೆದಿರುವ ಕಾರಣ ರಾಜಿನಾಮೆ ಪಡೆದೆವು. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ತನಿಖೆ ಕೈಗೊಂಡಿದೆ ಎಂದರು.
ಶರಣು ಪ್ರಕಾಶ್ ಪಾಟೀಲ್ ಅವರಿಗೂ ಪಾಲು ಹೋಗಿದೆ ಎಂಬ ಆರೋಪ ಮಾಡಿರುವ ಬಗ್ಗೆ ಮಾತನಾಡಿ ಅದಕ್ಕಾಗಿಯೇ ಎಸ್‍ಐಟಿ ರಚನೆಯಾಗಿದೆ. ತನಿಖೆಯ ವರದಿ ಬರಬೇಕು. ಅವರ ಮೇಲೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಬೇಕು. ಇದ್ಯಾವುದೂ ಇಲ್ಲದೇ ಕ್ರಮ ಕೈಗೊಳ್ಳುವುದು ಹೇಗೆ ಎಂದು ಪ್ರಶ್ನಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು