Monday, July 8, 2024

ಸತ್ಯ | ನ್ಯಾಯ |ಧರ್ಮ

ಉಕ್ರೇನ್ ಮೇಲೆ ರಷ್ಯಾದ ಕ್ಷಿಪಣಿ ದಾಳಿ: 20ಕ್ಕೂ ಹೆಚ್ಚು ಮಂದಿ ಸಾವು

ಕೀವ್: ಉಕ್ರೇನ್ ದೇಶದ ಹಲವು ನಗರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಸೇನೆ ಉಗ್ರ ದಾಳಿ ನಡೆಸಿದೆ. ಸೋಮವಾರ, ಹತ್ತಾರು ಕ್ಷಿಪಣಿಗಳು ಉಕ್ರೇನಿಯನ್ ನಗರಗಳ ಮೇಲೆ ದಾಳಿ ಮಾಡಿದವು.

ಉಕ್ರೇನ್‌ನ ರಾಜಧಾನಿ ಕೀವ್‌ನಲ್ಲಿರುವ ಮಕ್ಕಳ ಆಸ್ಪತ್ರೆಯ ಮೇಲೆ ಕ್ಷಿಪಣಿಗಳು ದಾಳಿ ನಡೆಸಿವೆ. ಈ ದಾಳಿಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಗೆ ನಿಲ್ಲದೆ ಕ್ರಿವಿ ರಿಹ್ ಸಿಟಿಯಲ್ಲಿರುವ ಕೇಂದ್ರೀಯ ವಿಶ್ವವಿದ್ಯಾಲಯದ ಮೇಲೆ ಮತ್ತೊಂದು ದಾಳಿ ನಡೆದಿದೆ. ಈ ಕ್ಷಿಪಣಿ ದಾಳಿಯಲ್ಲಿ 10 ಮಂದಿ ಸಾವನ್ನಪ್ಪಿದ್ದರು.

“ರಷ್ಯಾದ ಸೈನಿಕರು ಉಕ್ರೇನ್‌ನ ಐದು ನಗರಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಅನೇಕ ಕಟ್ಟಡಗಳು ಮತ್ತು ಅಪಾರ್ಟ್‌ಮೆಂಟ್‌ಗಳ ಮೇಲೆ 40ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಲಾಯಿತು. ಜಗತ್ತು ಈಗ ಮೌನವಾಗಿರಲು ಸಾಧ್ಯವಿಲ್ಲ. ಏಕೆಂದರೆ ರಷ್ಯಾ ಏನು ಮಾಡುತ್ತಿದೆ ಮತ್ತು ಆ ದೇಶ ಯಾವ ರೀತಿಯ ದಾಳಿಗಳನ್ನು ಮಾಡುತ್ತಿದೆ ಎಂಬುದರ ಬಗ್ಗೆ ಇಡೀ ಜಗತ್ತು ಗಮನಹರಿಸಬೇಕು” ಎಂದು ಉಕ್ರೇನ್ ಅಧ್ಯಕ್ಷ ವ್ಲಾದಿಮಿರ್ ಝೆಲೆನ್ಸ್ಕಿ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ.

ಸೋಮವಾರ ರಷ್ಯಾ ಸೇನೆ ನಡೆಸಿದ ದಾಳಿಯಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದರು. ಕ್ಷಿಪಣಿ ದಾಳಿಯಲ್ಲಿ ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಸಚಿವ ಇಹೋರ್ ಕ್ಲೈಮೆಂಕೊ ಹೇಳಿದ್ದಾರೆ.

ಕ್ರೈವಿ ರಿಹ್ ನಗರದಲ್ಲಿ ನಡೆದ ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಮತ್ತು 31 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ದೊಡ್ಡ ಪ್ರಮಾಣದ ಕ್ಷಿಪಣಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಅಮೆರಿಕದ ವಾಷಿಂಗ್ಟನ್ ನಲ್ಲಿ ಮೂರು ದಿನಗಳ ನ್ಯಾಟೋ ಸಭೆಗಳ ಹಿನ್ನೆಲೆಯಲ್ಲಿ ರಷ್ಯಾ ಉಕ್ರೇನ್ ಮೇಲೆ ಕ್ಷಿಪಣಿಗಳ ಮೂಲಕ ಮಿಂಚಿನ ದಾಳಿ ನಡೆಸಿರುವುದು ಗಮನಾರ್ಹ.

ಇದೇ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರೂ ರಷ್ಯಾ ಪ್ರವೇಶದಲ್ಲಿರುವುದು ಉಲ್ಲೇಖಾರ್ಹ.

Related Articles

ಇತ್ತೀಚಿನ ಸುದ್ದಿಗಳು