Wednesday, July 10, 2024

ಸತ್ಯ | ನ್ಯಾಯ |ಧರ್ಮ

ಕಠುವಾದಲ್ಲಿ ದೊಡ್ಡ ಭಯೋತ್ಪಾದಕ ದಾಳಿ: JCO ಸೇರಿದಂತೆ 5 ಯೋಧರು ಹುತಾತ್ಮ

ಕಠುವಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯ ಮಚೇಡಿ ಪ್ರದೇಶದಲ್ಲಿ ಸೋಮವಾರ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ಐವರು ಗಾಯಗೊಂಡಿದ್ದಾರೆ.

ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಭಯೋತ್ಪಾದಕರು ಸೇನಾ ವಾಹನವನ್ನು ಗ್ರೆನೇಡ್‌ ಬಳಸಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದರು.

ಕಥುವಾ ನಗರದಿಂದ 150 ಕಿಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿ ಮಚೇಡಿ-ಕಿಂಡ್ಲಿ-ಮಲ್ಹಾರ್ ರಸ್ತೆಯಲ್ಲಿ ಸೇನಾ ವಾಹನವು ನಿತ್ಯದ ಗಸ್ತು ತಿರುಗುತ್ತಿದ್ದ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ ಕಠುವಾ ಜಿಲ್ಲೆಯಲ್ಲಿ ನಡೆದ ಎರಡನೇ ದೊಡ್ಡ ದಾಳಿ ಇದಾಗಿದೆ. ಸೋಮವಾರದ ದಾಳಿಯ ಮೊದಲು, ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಮತ್ತು ಜೂನ್ 12 ಮತ್ತು 13ರಂದು ನಡೆದ ಇದೇ ರೀತಿಯ ಎನ್‌ಕೌಂಟರ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜವಾನ್ ಪ್ರಾಣ ಕಳೆದುಕೊಂಡರು.

ಸೋಮವಾರ ಹೊಂಚುದಾಳಿ ನಡೆಸಿದ ನಂತರ ಭಯೋತ್ಪಾದಕರು ಸಮೀಪದ ಅರಣ್ಯಕ್ಕೆ ಪರಾರಿಯಾಗಿದ್ದಾರೆ. ಪೊಲೀಸರು ಮತ್ತು ಅರೆಸೇನಾ ಪಡೆಗಳ ನೆರವಿನಿಂದ ಸೇನೆ ಪ್ರತಿದಾಳಿ ನಡೆಸುತ್ತಿದೆ. ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಮತ್ತು ದಾಳಿಕೋರರನ್ನು ತಟಸ್ಥಗೊಳಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ತಕ್ಷಣವೇ ಪ್ರದೇಶಕ್ಕೆ ಕಳುಹಿಸಲಾಯಿತು. ಭಯೋತ್ಪಾದಕರ ಮೂರು ಮಂದಿಯಿದ್ದು ಅವರು ಶಸ್ತ್ರಸಜ್ಜಿತರಾಗಿದ್ದಾರೆ ಮತ್ತು ಅವರು ಇತ್ತೀಚೆಗೆ ಗಡಿಯಿಂದ ನುಸುಳಿದ್ದಾರೆ ಎಂದು ಶಂಕಿಸಲಾಗಿದೆ.

ಈ ಹಿಂದೆ ಹಲವು ಎನ್‌ಕೌಂಟರ್‌ಗಳು ನಡೆದಿರುವ ಉಧಮ್‌ಪುರ ಜಿಲ್ಲೆಯ ಬಸಂತ್‌ಗಢ್‌ಗೆ ಹೊಂದಿಕೊಂಡಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪೊಲೀಸ್ ಮಹಾನಿರ್ದೇಶಕ ಆರ್‌ಆರ್‌ಸ್ವೈನ್ ಖುದ್ದು ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಈ ಅರಣ್ಯ ಪ್ರದೇಶವು ಉಧಮ್‌ಪುರ ಜಿಲ್ಲೆಯ ಬಸಂತ್‌ಗಢದ ಪಕ್ಕದಲ್ಲಿದೆ. ಏಪ್ರಿಲ್ 28ರಂದು ಬಸಂತ್‌ಗಢದ ಪನಾರಾ ಗ್ರಾಮದಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಗ್ರಾಮ ರಕ್ಷಣಾ ಕಾವಲುಗಾರ ಮೊಹಮ್ಮದ್ ಷರೀಫ್ ಹತರಾಗಿದ್ದರು.

ಭಯೋತ್ಪಾದಕರು ಗಡಿಯಾಚೆ ನುಸುಳಿ ಒಳನಾಡು ತಲುಪಲು ಈ ಮಾರ್ಗವನ್ನು ಬಳಸಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಗೆ ಒಳಗಾದ ಸೇನಾ ವಾಹನದಲ್ಲಿ 10 ಸೈನಿಕರಿದ್ದರು.

Related Articles

ಇತ್ತೀಚಿನ ಸುದ್ದಿಗಳು