Friday, July 12, 2024

ಸತ್ಯ | ನ್ಯಾಯ |ಧರ್ಮ

11 ಅಧಿಕಾರಿಗಳಿಗೆ ಲೋಕಾಯುಕ್ತ ಬಿಸಿ: ವಿವಿಧೆಡೆ 56 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯ ಸರಕಾರದ ಇಬ್ಬರು ನಿವೃತ್ತ ಎಂಜಿನಿಯರ್ ಗಳು ಸೇರಿದಂತೆ 11 ಅಧಿಕಾರಿಗಳಿಗೆ ಸಂಬಂಧಿಸಿದ 56 ಸ್ಥಳಗಳ ಮೇಲೆ ಇಂದು ಮುಂಜಾನೆಯಿಂದ ಲೋಕಾಯುಕ್ತ ದಾಳಿ ಮುಂದುವರೆದಿದೆ.

ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದ ಅಧಿಕಾರಿಗಳ ಮನೆಗಳ ಮೇಲೆ ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಇಂದು ಬೆಳಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಎಲ್ಲ ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಲೋಕಾಯುಕ್ತ ಪೊಲೀಸ್ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ.

ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ, ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕೆ.ಜಿ. ಜಗದೀಶ್, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ್ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್., ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್. ಉಮೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್.ಪ್ರಭಾಕರ, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು, ಹಾಸನದ ಗ್ರಾಮ ಪಂಚಾಯತ್ ಒಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್ ಎಂಬವರ ಮನೆ, ಅವರಿಗೆ ಸಂಬಂಧಿಸಿದವರ ಮನೆಗಳು, ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು