Saturday, July 13, 2024

ಸತ್ಯ | ನ್ಯಾಯ |ಧರ್ಮ

ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳನ್ನು ಸಿಬಿಐಗೆ ಒಪ್ಪಿಸಿ: ಸಂಸದ ಯದುವೀರ್ ಆಗ್ರಹ

ಮಡಿಕೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಯನ್ನು ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು ಎಂದು ಮೈಸೂರು-ಕೊಡಗು ಲೋಕಸಭೆ ಎಂಪಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗುರುವಾರ ಒತ್ತಾಯಿಸಿದರು.

ಮಡಿಕೇರಿಯಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ವಹಿಸಲಿ. ಆರೋಪ ಎದುರಿಸುತ್ತಿರುವವರು ಆಡಳಿತದಲ್ಲಿ ಮುಂದುವರಿಯುವ ಮುನ್ನ ಸಿಬಿಐ ತನಿಖೆ ಎದುರಿಸಿ ದೋಷಮುಕ್ತ ಎನ್ನಿಸಿಕೊಳ್ಳಬೇಕು ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಸಂಸದ ಯದುವೀರ್, ಮುಡಾ ಸಂಸ್ಥೆಯನ್ನು ಹಿಂದಿನ ಮೈಸೂರು ಸಂಸ್ಥಾನದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನಿವೇಶನಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಯಿತು. ಆದರೆ, ಇಂದು ಪ್ರಾಧಿಕಾರ ಶ್ರೀಮಂತರಿಗೆ ನಿವೇಶನ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು