Saturday, July 27, 2024

ಸತ್ಯ | ನ್ಯಾಯ |ಧರ್ಮ

ಅಗ್ನಿವೀರ ರದ್ದುಗೊಳಿಸುವುದು ನಮ್ಮ ಮೊದಲ ಆದ್ಯತೆ: ಅಖಿಲೇಶ್‌ ಯಾದವ್‌

“ನಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸುತ್ತೇವೆ” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ಹೇಳಿದ್ದಾರೆ.

ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್ ಯಾದವ್, “ನಾವು ಅಧಿಕಾರಕ್ಕೆ ಬಂದ ತಕ್ಷಣ, ದೇಶದ ಭದ್ರತೆಗೆ ರಾಜಿ ಮಾಡಿಕೊಳ್ಳುವ ಮತ್ತು ಸೈನಿಕರ ಭವಿಷ್ಯದ ಜೊತೆ ಆಟವಾಡುವ ಅಲ್ಪಾವಧಿಯ ‘ಅಗ್ನಿವೀರ್’ ಸೇನಾ ನೇಮಕಾತಿಯನ್ನು 24 ಗಂಟೆಗಳಲ್ಲಿ ರದ್ದುಗೊಳಿಸಲಾಗುವುದು” ಎಂದಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ ಒಂದು ದಿನದ ನಂತರ ಅಖಿಲೇಶ್ ಯಾದವ್ ಹೇಳಿಕೆ ನೀಡಿರುವುದು ವಿಶೇಷವಾಗಿದೆ. “ಅಗ್ನಿವೀರ್‌ ರದ್ದು ಪಡಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಹಳೆಯ ಮಾದರಿಯ ಸೈನಿಕ ನೇಮಕಾತಿಯನ್ನು ಮರು ಆರಂಭಿಸುವುದು ನಮ್ಮ ಉದ್ದೇಶ ಎಂದು ಅವರು ಪೋಸ್ಟ್‌ ನಲ್ಲಿ ಬರೆದಿದ್ದಾರೆ.

ಸೇವೆಯಿಂದ ಹಿಂದಿರುಗಿದ ಅಗ್ನಿವೀರರಿಗೆ ಉತ್ತರ ಪ್ರದೇಶ ಸರ್ಕಾರವು ನೇಮಕಾತಿ ನೀಡಲಿದೆ ಎಂದು ಸಿಎಂ ಆದಿತ್ಯನಾಥ್ ಶುಕ್ರವಾರ ಘೋಷಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು