Thursday, August 15, 2024

ಸತ್ಯ | ನ್ಯಾಯ |ಧರ್ಮ

ಶೂಟಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಕಂಚು – ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಮನು ಭಾಕರ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಲಭಿಸಿದೆ. 10ಮೀ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್ ಮತ್ತು ಸರಭ್ಜ್ಯೋತ್ ಅವರ ಭಾರತ ತಂಡ ಕಂಚಿನ ಪದಕ ಗೆದ್ದುಕೊಂಡಿತು.

ಫೈನಲ್‌ನಲ್ಲಿ ಭಾರತ 16-10 ಅಂಕಗಳಿಂದ ದಕ್ಷಿಣ ಕೊರಿಯಾವನ್ನು ಸೋಲಿಸಿತು.

ಈ ಪದಕದೊಂದಿಗೆ ಭಾರತದ ಶೂಟರ್ ಮನು ಭಾಕರ್ ಅವರು ಒಲಿಂಪಿಕ್ಸ್ ನಲ್ಲಿ ಇದುವರೆಗೆ ಭಾರತದ ಯಾವ ಆಟಗಾರನೂ ಮಾಡದ ಅಪರೂಪದ ಸಾಧನೆ ಮಾಡಿದ್ದಾರೆ.

ಈ ಮೂಲಕ ಮನು ಭಾಕರ್ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಏಕೈಕ ಭಾರತೀಯ ಆಟಗಾರರು ಮತ್ತು ಮಹಿಳಾ ಶೂಟರ್ ಎಂಬ ಇತಿಹಾಸ ನಿರ್ಮಿಸಿದರು.

ಅವರು ಭಾನುವಾರ ಮಹಿಳೆಯರ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನೂ ಗೆದ್ದಿದ್ದರು.

ಇದರೊಂದಿಗೆ ಅವರ ಖಾತೆಗೆ ಎರಡು ಒಲಿಂಪಿಕ್ಸ್ ಪದಕಗಳು ಸೇರ್ಪಡೆಗೊಂಡವು.

ಮಂಗಳವಾರ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜ್ಯೋತ್ ಅವರ ಭಾರತ ತಂಡವು ದಕ್ಷಿಣ ಕೊರಿಯಾದ ಲೀ-ಯೆಜಿನ್ ಜೋಡಿಯನ್ನು 16-10 ರಿಂದ ಸೋಲಿಸಿತು.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಇದು ಎರಡನೇ ಪದಕವಾಗಿದೆ. ಈ ಎರಡೂ ಪದಕಗಳು ಶೂಟಿಂಗ್‌ನಲ್ಲಿ ಬಂದಿವೆ. ಒಲಿಂಪಿಕ್ಸ್‌ನಲ್ಲಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಭಾರತ ಗೆದ್ದ ಮೊದಲ ಪದಕ ಇದಾಗಿದೆ.

ಒಟ್ಟಾರೆ ಎಲ್ಲಾ ಒಲಿಂಪಿಕ್ಸ್‌ನಲ್ಲಿ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ ಆರಕ್ಕೇರಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page