ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಘಟ್ಟ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಕ್ರಮ ಭೂ ಒತ್ತುವರಿ ಯಾವುದೇ ಮುಲಾಜಿಲ್ಲದೆ ತೆರವು : ಅರಣ್ಯ ಸಚಿವ ಈಶ್ವರ್ ಖಂಡ್ರೆ

PPeepal Media Desk

Peepal Media Desk • ಮೀಡಿಯಾ, ರಾಜಕೀಯ, ರಾಜ್ಯ

• 1 ನಿಮಿಷದ ಓದು

ಘಟ್ಟ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಕ್ರಮ ಭೂ ಒತ್ತುವರಿ ಯಾವುದೇ ಮುಲಾಜಿಲ್ಲದೆ ತೆರವು : ಅರಣ್ಯ ಸಚಿವ ಈಶ್ವರ್ ಖಂಡ್ರೆ

ಕರ್ನಾಟಕಕ್ಕೆ ಸಂಬಂಧಿಸಿದಂತೆ ಘಟ್ಟ ಪ್ರದೇಶ, ಗಿರಿ ಶಿಖರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅರಣ್ಯ ಒತ್ತುವರಿ ತೆರವುಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಘಟ್ಟ ಪ್ರದೇಶದ ಅಕ್ರಮ ಅರಣ್ಯ ಒತ್ತುವರಿ ಶೀಘ್ರದಲ್ಲೇ ತೆರವುಗೊಳಿಸಿ, ವರದಿ ನೀಡುವಂತೆ ಆದೇಶಿಸಿದ್ದಾರೆ.

ತೀವ್ರ ಮಳೆಯಿಂದಾಗಿ ಹಾನಿಗೊಳಗಾದ ರಾಜ್ಯದ ಶಿರೂರು, ಶಿರಾಡಿ ಘಾಟ್ ಹಾಗೂ ನೆರೆ ರಾಜ್ಯದ ವಯನಾಡ್ ದುರಂತವನ್ನು ಉಲ್ಲೇಖಿಸಿದ ಅರಣ್ಯ ಸಚಿವರು, ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಈ ರೀತಿಯ ದುರಂತ ಮರುಕಳಿಸಬಾರದು ಎಂದರೆ ಈ ನಿರ್ಧಾರ ಅನಿವಾರ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.

“ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು. 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ಎಚ್ಚರಿಕೆಯ ಗಂಟೆಯಾಗಿವೆ. ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ತಿಳಿಸಿದ್ದಾರೆ.

“ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ” ಎಂದು ಆದೇಶದಲ್ಲಿ ಹೇಳಿದ್ದಾರೆ.

“ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳಲು, ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತತ್ ಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಲು ಈ ಮೂಲಕ ಸೂಚಿಸಿದೆ” ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.

PPeepal Media Desk

Peepal Media Desk

Peepal Media · ಮೀಡಿಯಾ ವಿಭಾಗ

ಸಂಬಂಧಿತ ಸುದ್ದಿಗಳು