Thursday, August 8, 2024

ಸತ್ಯ | ನ್ಯಾಯ |ಧರ್ಮ

“ಅಲ್ವಿದಾ ಕುಸ್ತಿ 2001 – 2024” ; ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಪೋಗಟ್

ಪ್ಯಾರೀಸ್ ಒಲಿಂಪಿಕ್ಸ್ 2024 ರ ಮಹಿಳಾ ವಿಭಾಗದ ಕುಸ್ತಿಯ ಫೈನಲ್ ಪಂದ್ಯದಿಂದ ಅನರ್ಹಗೊಂಡ ಬೆನ್ನಲ್ಲೇ ಭಾರತದ ಹೆಸರಾಂತ ಕುಸ್ತಿ ಪಟು ವಿನೇಶ್ ಪೋಗಟ್ ಕುಸ್ತಿಗೆ ನಿವೃತ್ತಿ ಘೋಷಿಸಿದ್ದಾರೆ. ಗುರುವಾರ ಬೆಳಿಗ್ಗೆ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಕುಸ್ತಿಯಿಂದ ನಿವೃತ್ತಿಯ ಘೋಷಣೆ ಮಾಡಿದ್ದಾರೆ.

“ಕುಸ್ತಿ ನನ್ನ ವಿರುದ್ಧ ಪಂದ್ಯವನ್ನು ಗೆದ್ದಿತು, ನಾನು ಸೋತೆ… ನಿಮ್ಮ ಕನಸುಗಳು ಮತ್ತು ನನ್ನ ಧೈರ್ಯ ಛಿದ್ರವಾಗಿದೆ. ನನಗೆ ಈಗ ಹೆಚ್ಚಿನ ಶಕ್ತಿ ಇಲ್ಲ. ಗುಡ್ ಬೈ ಕುಸ್ತಿ 2001-2024. ನಿಮ್ಮೆಲ್ಲರಿಗೂ ನಾನು ಎಂದೆಂದಿಗೂ ಋಣಿಯಾಗಿರುತ್ತೇನೆ. ಕ್ಷಮಿಸಿ” ಎಂದು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ವಿನೇಶ್ ಪೋಗಟ್ ಪಂದ್ಯ ಇದ್ದದ್ದರಿಂದ, ಬೆಳಿಗ್ಗೆ 100 ಗ್ರಾಂ ಹೆಚ್ಚು ತೂಕವನ್ನು ಹೊಂದಿರುವ ಹಿನ್ನೆಲೆಯಲ್ಲಿ ಪಂದ್ಯಕ್ಕೆ ಕೆಲವೇ ಗಂಟೆಗಳ ಮೊದಲು ಅವರನ್ನು ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಯಿತು.

ಒಲಿಂಪಿಕ್ ಕ್ರೀಡಾಕೂಟದ ಫೈನಲ್ಗೆ ಪ್ರವೇಶಿಸಿದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 29 ವರ್ಷದ ವಿನೇಶ್ ಪೋಗಟ್, ಮಹಿಳೆಯರ 50 ಕೆಜಿ ವಿಭಾಗದಲ್ಲಿ ಕನಿಷ್ಠ ಬೆಳ್ಳಿ ಪದಕವನ್ನು ಖಚಿತಪಡಿಸಿಕೊಂಡಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page