Thursday, August 22, 2024

ಸತ್ಯ | ನ್ಯಾಯ |ಧರ್ಮ

ಮಹಿಳೆಯರ ಮೇಲಿನ ದೌರ್ಜನ್ಯದ ವಿಷಯದಲ್ಲಿ ಬಿಜೆಪಿ ನಾಯಕರೇ ಮುಂದೆ: ಎಡಿಆರ್‌ ವರದಿ

ಹೊಸದಿಲ್ಲಿ: ದೇಶಾದ್ಯಂತ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು 16 ಹಾಲಿ ಸಂಸದರು ಮತ್ತು 135 ಶಾಸಕರು ಎದುರಿಸುತ್ತಿದ್ದಾರೆ ಎಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಹೇಳಿದೆ.

2019 ಮತ್ತು 2024ರ ನಡುವೆ ರಾಜಕಾರಣಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ತಮ್ಮ ಚುನಾವಣಾ ಅಫಿಡವಿಟ್ ದಾಖಲೆಗಳಲ್ಲಿ ಈ ವಿವರವನ್ನು ಬಹಿರಂಗಪಡಿಸಿದ್ದಾರೆ. ಕೆಲವರು ಲೈಂಗಿಕ ದೌರ್ಜನ್ಯದ ಗಂಭೀರ ಆರೋಪಗಳನ್ನು ಹೊಂದಿದ್ದಾರೆ ಎಂದು ಅದು ಹೇಳಿದೆ. ವರದಿಯ ಪ್ರಕಾರ, ಇಬ್ಬರು ಹಾಲಿ ಸಂಸದರು ಮತ್ತು 14 ಶಾಸಕರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಗಳಿವೆ. ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಗೆ ಅವಕಾಶವಿದೆ.

ಬಿಜೆಪಿಯಿಂದ 54 ಮಂದಿ

ಪಕ್ಷಗಳ ಪ್ರಕಾರ ನೋಡುವುದಾದರೆ ಮೊದಲ ಸ್ಥಾನದಲ್ಲಿ ಆಡಳಿತಾರೂಢ ಬಿಜೆಪಿಯ 54 ಸಂಸದರು/ಶಾಸಕರಿದ್ದಾರೆ. ಎಡಿಆರ್ ವರದಿ ಪ್ರಕಾರ, ಕಾಂಗ್ರೆಸ್ 23 ಮತ್ತು ತೆಲುಗು ದೇಶಂ 17 ಅಭ್ಯರ್ಥಿಗಳನ್ನು ಹೊಂದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ತಲಾ ಐವರು ಶಾಸಕರು ಮಹಿಳೆಯರ ಮೇಲಿನ ಅತ್ಯಾಚಾರದ ಆರೋಪ ಎದುರಿಸುತ್ತಿದ್ದಾರೆ.

ಮೊದಲ ಸ್ಥಾನ ಪಶ್ಚಿಮ ಬಂಗಾಳ

ಮಹಿಳೆಯರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿರುವವರಲ್ಲಿ ಪಶ್ಚಿಮ ಬಂಗಾಳದ ಶಾಸಕರು ಅಗ್ರಸ್ಥಾನದಲ್ಲಿದ್ದಾರೆ ಎಂದು ಎಡಿಆರ್ ವರದಿ ಬಹಿರಂಗಪಡಿಸಿದೆ. 25 ಸಂಸದರು/ಶಾಸಕರು ಪ್ರಕರಣಗಳನ್ನು ಎದುರಿಸುತ್ತಿದ್ದು, ಆಂಧ್ರಪ್ರದೇಶ (21) ಮತ್ತು ಒಡಿಶಾ (17) ನಂತರದ ಸ್ಥಾನದಲ್ಲಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page