Sunday, August 25, 2024

ಸತ್ಯ | ನ್ಯಾಯ |ಧರ್ಮ

ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಬುಲ್ಡೋಜರ್ ಬಳಕೆ ಮಾಡುತ್ತಿರುವುದು ಆತಂಕಕಾರಿ: ಮಲ್ಲಿಕಾರ್ಜುನ ಖರ್ಗೆ

ಹೊಸದೆಹಲಿ: ಬಿಜೆಪಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಅವರಲ್ಲಿ ಭಯ ಹುಟ್ಟಿಸಲು ಬುಲ್ಡೋಜರ್‌ಗಳನ್ನು ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರ ಮನೆಗಳನ್ನು ಬುಲ್ಡೋಜ್ ಮಾಡಿರುವುದನ್ನು ಖರ್ಗೆ ಖಂಡಿಸಿದರು. ಇದನ್ನು ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ‘ಒಬ್ಬರ ಮನೆ ಕೆಡವಿ ಹಾಕುವುದು. ಅವರ ಕುಟುಂಬವನ್ನು ನಿರಾಶ್ರಿತರನ್ನಾಗಿ ಮಾಡುವುದು ಅಮಾನವೀಯ ಮತ್ತು ಅನ್ಯಾಯ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಅಲ್ಪಸಂಖ್ಯಾತರ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿರುವುದು ತೀವ್ರ ಕಳವಳಕಾರಿ ಸಂಗತಿಯಾಗಿದೆ. ಕಾನೂನಿನ ಆಡಳಿತವಿರುವ ಸಮಾಜದಲ್ಲಿ ಇಂತಹ ಕ್ರಮಗಳಿಗೆ ಸ್ಥಾನವಿಲ್ಲ’ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ನೈಸರ್ಗಿಕ ನ್ಯಾಯವನ್ನು ಅರಾಜಕತೆಯಿಂದ ಬದಲಾಯಿಸಲು ಸಾಧ್ಯವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಅಪರಾಧಿಗಳಿಗೆ ನ್ಯಾಯಾಲಯದ ಮೂಲಕ ಶಿಕ್ಷೆಯಾಗಬೇಕೇ ಹೊರತು ರಾಜ್ಯಗಳ ಬಲವಂತದಿಂದಲ್ಲ ಎಂದು ಹೇಳಿದರು. ಬಿಜೆಪಿ ರಾಜ್ಯ ಸರ್ಕಾರಗಳು ಸಂವಿಧಾನವನ್ನು ನಿರ್ಲಕ್ಷಿಸುತ್ತಿವೆ. ”ನಾಗರಿಕರಲ್ಲಿ ಭಯ ಹುಟ್ಟಿಸಲು ಬುಲ್ಡೋಜರ್ ಬಳಸುವುದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಅರಾಜಕತೆ ನೈಸರ್ಗಿಕ ನ್ಯಾಯಕ್ಕೆ ಬದಲಿಯಾಗಲು ಸಾಧ್ಯವಿಲ್ಲ. ನ್ಯಾಯಾಲಯಗಳು ಅಪರಾಧಗಳನ್ನು ನಿರ್ಣಯಿಸುತ್ತವೆ. ಅದನ್ನು ಸರ್ಕಾರಿ ಪ್ರಾಯೋಜಿತ ಬಲವಂತದ ಮೂಲಕ ಮಾಡಬಾರದುʼ ಎಂದು ಪೋಸ್ಟ್ ಹೇಳಿದೆ.

ಭೋಪಾಲ್‌ನಲ್ಲಿ ಪೊಲೀಸ್ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿದ ಆರೋಪಕ್ಕೆ ಗುರಿಯಾಗಿರುವ ಕಾಂಗ್ರೆಸ್ ಮುಖಂಡ ಹಾಜಿ ಶೆಹಜಾದ್ ಅಲಿ ಅವರ ಬಂಗಲೆಯನ್ನು ಅಧಿಕಾರಿಗಳು ಇತ್ತೀಚೆಗೆ ನೆಲಸಮಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಈ ರೀತಿ ಪ್ರತಿಕ್ರಿಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page