Wednesday, September 18, 2024

ಸತ್ಯ | ನ್ಯಾಯ |ಧರ್ಮ

ರಾಹುಲ್ ಗಾಂಧಿ ವಿರುದ್ಧ ‘ಬೆದರಿಕೆ ಹೇಳಿಕೆ’ ನೀಡಿದ ಬಿಜೆಪಿ ಮತ್ತು ಶಿವಸೇನೆಯ ನಾಲ್ವರು ನಾಯಕರ ವಿರುದ್ಧ ದೂರು ದಾಖಲು

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಮತ್ತು ಬೆದರಿಕೆ ಹೇಳಿಕೆ ನೀಡಿದ ಕೇಂದ್ರ ಸಚಿವ ರವನೀತ್ ಬಿಟ್ಟು ಸೇರಿದಂತೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿವಸೇನೆಯ ನಾಲ್ವರು ನಾಯಕರ ವಿರುದ್ಧ ಕಾಂಗ್ರೆಸ್ ಬುಧವಾರ ಪೊಲೀಸ್ ದೂರು ದಾಖಲಿಸಿದ್ದು, ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿದೆ.

ಪಕ್ಷದ ಖಜಾಂಚಿ ಅಜಯ್ ಮಾಕನ್ ಇಲ್ಲಿನ ತುಘಲಕ್ ರಸ್ತೆ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರ ಹಿತದೃಷ್ಟಿಯಿಂದ ಸಂವಿಧಾನ ಉಳಿಸುವ ಬಗ್ಗೆ ಮಾತನಾಡುವ ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಇಂತಹ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮಾಕೆನ್ ಹೇಳಿದ್ದಾರೆ.

ಬಿಟ್ಟು, ಬಿಜೆಪಿ ನಾಯಕ ತರ್ವಿಂದರ್ ಮರ್ವಾ, ಉತ್ತರ ಪ್ರದೇಶ ಸರ್ಕಾರದ ಸಚಿವ ರಘುರಾಜ್ ಸಿಂಗ್ ಮತ್ತು ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351, 352, 353, 61ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಕಾಂಗ್ರೆಸ್ ಒತ್ತಾಯಿಸಿದೆ.

ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಖ್ಖರ ಬಗ್ಗೆ ನೀಡಿದ ಹೇಳಿಕೆಯನ್ನು ಟೀಕಿಸಿದ್ದಾರೆ, ಅವರನ್ನು ‘ದೇಶದ ದೊಡ್ಡ ಶತ್ರು ಮತ್ತು ಭಯೋತ್ಪಾದಕ’ ಎಂದು ಕರೆದಿದ್ದಾರೆ. ಬಿಜೆಪಿ ನಾಯಕರಾದ ರಘುರಾಜ್ ಸಿಂಗ್, ಮರ್ವಾ ಮತ್ತು ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್ ಕೂಡ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page