Saturday, October 5, 2024

ಸತ್ಯ | ನ್ಯಾಯ |ಧರ್ಮ

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಪುಣೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ (Vinayak Damodar Savarkar) ಅವರ ಬಗ್ಗೆ ಕಟುವಾದ ಹೇಳಿಕೆಗಳನ್ನು ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಪುಣೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪ್ರತಿ ಸಂದರ್ಭದಲ್ಲೂ ರಾಹುಲ್ ಸಾವರ್ಕರ್ ಅವರನ್ನು ಅವಮಾನಿಸುತ್ತಿದ್ದಾರೆ ಎಂದು ಸಾತ್ಯಕಿ ಆರೋಪಿಸಿದರು. ಪ್ರಕರಣವನ್ನು ಕಳೆದ ತಿಂಗಳು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯದಿಂದ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ನ್ಯಾಯಾಲಯ ರಾಹುಲ್ ಗೆ ಸಮನ್ಸ್ ಕಳುಹಿಸಿದೆ. ಅಕ್ಟೋಬರ್ 23ರಂದು ತಮ್ಮ ಮುಂದೆ ಹಾಜರಾಗುವಂತೆ ಆದೇಶಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page