Tuesday, October 8, 2024

ಸತ್ಯ | ನ್ಯಾಯ |ಧರ್ಮ

ಮುಮ್ತಾಜ್ ಅಲಿ ಆತ್ಮ*ತ್ಯೆಯ ಮಿಸ್ಟರಿಯಲ್ಲಿ ‘ಹನಿಟ್ರಾಪ್’ನ ಹೊಗೆ!

ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣದ ಹಿಂದೆ ವ್ಯವಸ್ಥಿತ ಹನಿಟ್ರಾಪ್ ಜಾಲದ ಬಗ್ಗೆ ಮಾಹಿತಿ ಹೊರ ಬಿದ್ದಿದೆ. ಮಮ್ತಾಜ್ ಅಲಿ ಅವರ ಆತ್ಮಹತ್ಯೆಗೆ ಅವರ ಸಹೋದರ ಕೊಟ್ಟ ಕಾರಣಗಳ ಹಿಂದೆ ಹನಿಟ್ರಾಪ್ ಅಂಶವನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಮಮ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮುಮ್ತಾಜ್ ಅಲಿ ಸಾವಿನ ನಂತರ ಅವರ ಸಹೋದರ ಕೊಟ್ಟ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕಾರಣರಾದ ಶಂಕಿತ ಆರೋಪಿಗಳು ದೇಶ ಬಿಟ್ಟು ತೆರಳದಂತೆ ಎಲ್ಓಸಿ ಜಾರಿ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿಸಿದ ಪೊಲೀಸರು, ಸೋಮವಾರ ಬೆಳಿಗ್ಗೆ 10 ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಸಿಕ್ಕಿದೆ. ನಂತರ ಅವರ ಸಹೋದರ ಕಾವೂರು ಠಾಣೆಗೆ ನೀಡಿದ ದೂರಿನಲ್ಲಿ ಹನಿ ಟ್ರ್ಯಾಪ್ ಮಾಡಿದ್ದಾರೆಂದು ಉಲ್ಲೇಖ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಶಂಕಿತ ಆರು ಮಂದಿ ಮೇಲೆ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ಮುಮ್ತಾಜ್ ಅಲಿ ಅವರು ಮೂರು ತಿಂಗಳಿನಿಂದ ಖಿನ್ನತೆಯಲ್ಲಿ ಹೋಗಿದ್ದರು ಎಂದು ಉಲ್ಲೇಖಿಸಿದ್ದಾರೆ. ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಖಾಸಗಿ ಕ್ಷಣಗಳ ವಿಡಿಯೋ ಮಾಡಿಕೊಂಡು, ಹಣಕ್ಕಾಗಿ ಮುಮ್ತಾಜ್ ಗೆ ಬೆದರಿಕೆ ಹಾಕಿದ ಬಗ್ಗೆ ದೂರು ಸಲ್ಲಿಕೆಯಾಗಿದೆ.

ಸಧ್ಯಕ್ಕೆ ಸಿಕ್ಕ ಸಾಕ್ಷ್ಯಗಳ ಅಡಿಯಲ್ಲಿ ಮುಮ್ತಾಜ್ ಅವರ ಮೊಬೈಲ್ ಸತ್ತಾರ್ ಎಂಬಾತನ ಬಗ್ಗೆ ಹೇಳಿದ್ದಾರೆ. ಇನ್ನೊಬ್ಬ ಆರೋಪಿ ರೆಹಮತ್ ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್ ಗೆ ಮುಮ್ತಾಜ್ ಅಲಿ ಕಾರು ಡಿಕ್ಕಿಯಾಗಿದೆ. ಬಸ್ ನವರ ಹೇಳಿಕೆಯನ್ನು ಪಡೆದಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page