ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹರಿಯಾಣ ವಿಧಾನಸಭೆ ಚುನಾವಣೆ ಸೋಲು; ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಹರಿಯಾಣ ವಿಧಾನಸಭೆ ಚುನಾವಣೆ ಸೋಲು; ಅತಿಯಾದ ಆತ್ಮವಿಶ್ವಾಸ ಕಾರಣ: ಡಿ.ಕೆ.ಸುರೇಶ್

ಬೆಂಗಳೂರು, ಅ.09: “ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಅತಿಯಾದ ಆತ್ಮವಿಶ್ವಾಸ ಕಾರಣ. ಹೈಕಮಾಂಡ್ ಸೋಲಿನ ಬಗ್ಗೆ ಪರಾಮರ್ಶನೆ ಮಾಡುತ್ತದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಬುಧವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, “ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ ಎನ್ನುವುದಕ್ಕೆ ಇದು ಸಾಕ್ಷಿ ಹಾಗೂ ಉತ್ತಮ ನಿದರ್ಶನ. ಜಮ್ಮು, ಕಾಶ್ಮೀರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ರಚನೆ ಮಾಡುತ್ತದೆ” ಎಂದರು.

ಹರಿಯಾಣ ಫಲಿತಾಂಶ ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ಕೇಳಿದಾಗ, “ಈ ಎರಡೂ ರಾಜ್ಯಗಳ ಪರಿಸ್ಥಿತಿ ಬೇರೆ, ಬೇರೆ ರೀತಿಯಿದೆ. ಇವು ಆಯಾ ರಾಜ್ಯಗಳ ಚುನಾವಣೆಯಾಗಿದ್ದು, ಬೇರೆ ರಾಜ್ಯಗಳ ಫಲಿತಾಂಶ ಇವುಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳೇ ಬೇರೆ, ಬೇರೆ” ಎಂದರು.

ಹರಿಯಾಣ ಸೋಲಿಗೆ ಮುಡಾ ಪ್ರಕರಣ ಕಾರಣ ಎನ್ನುವ ಮಾಜಿ ಸಭಾಪತಿ ಕೋಳಿವಾಡ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕೋಳಿವಾಡ ಅವರ ಹೇಳಿಕೆಗೂ ಹರಿಯಾಣ ಸೋಲಿಗೂ ಸಂಬಂಧವಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ತಿಳಿಸಲಿದ್ದಾರೆ” ಎಂದರು.

ಇವಿಎಂ ಬಗ್ಗೆ ಮತ್ತೆ ಅನುಮಾನಗಳು ವ್ಯಕ್ತವಾಗುತ್ತಿವೆ ಎಂದಾಗ, “ಇದರ ಬಗ್ಗೆ ನಮ್ಮ ಎಐಸಿಸಿ ವರಿಷ್ಠರು ಮಾತನಾಡುತ್ತಾರೆ” ಎಂದರು.

ಕೆಲಸವಿಲ್ಲದ ಕುಮಾರಸ್ವಾಮಿ ಅವರಿಗೆ ಉತ್ತರ ನೀಡುವುದಿಲ್ಲ

ಮುಡಾ ಪ್ರಕರಣ ಮುಚ್ಚಿ ಹಾಕಲು ಜಾತಿಗಣತಿ ವಿಷಯ ಮುನ್ನಲೆಗೆ ತಂದಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬೆಳಿಗ್ಗೆ ಒಂದು, ಸಂಜೆಯೊಂದು ಮಾತನಾಡುವವರಿಗೆ ನಾವು ಉತ್ತರ ನೀಡುವುದಿಲ್ಲ. ಮಾಧ್ಯಮದವರಿಗೆ ಅವರು ಗಂಭೀರ ವ್ಯಕ್ತಿ ಎನಿಸಬಹುದು, ಆದರೆ ನಮಗಲ್ಲ. ಅವರ ಯಾವುದೇ ಹೇಳಿಕೆಗಳು ನ್ಯಾಯಯುತವಾಗಿರುವುದಿಲ್ಲ. ಅವರಿಗೆ ಕೆಲಸವಿಲ್ಲ, ಅದಕ್ಕೆ ಮಾತನಾಡುತ್ತಾರೆ. ಅವರಿಗೆ ಮೋದಿ ಅವರು ಒಳ್ಳೆ ಕೆಲಸ ಕೊಟ್ಟಿದ್ದಾರೆ, ಅದನ್ನು ಬಿಟ್ಟು ಕರ್ನಾಟಕದ ವಿಚಾರದಲ್ಲಿ ಮಾತನಾಡುತ್ತಿದ್ದಾರೆ.”

ನಾವೆಲ್ಲ ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದೇವೆ

ಮಹದೇವಪ್ಪ, ಸತೀಶ್ ಜಾರಕಿಹೊಳಿ ಭೇಟಿ ವಿಚಾರದ ಬಗ್ಗೆ ಕೇಳಿದಾಗ, “ಮಹದೇವಪ್ಪ ಹಿರಿಯ ಸಚಿವರು. ಪರಮೇಶ್ವರ್ ಅವರು ಪ್ರಮುಖ ಖಾತೆ ಹೊಂದಿರುವವರು, ಇವರುಗಳು ರಾಜಕೀಯ ಹೊರತಾಗಿ ಸೇರಿದ್ದಾರೆ. ಈಗಾಗಲೇ ಸರ್ಕಾರದ 136 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಇದ್ದಾರೆ ಎನ್ನುವ ಸಂದೇಶವನ್ನು ನಾವು ಕೊಟ್ಟಿದ್ದೇವೆ” ಎಂದರು.

ಖರ್ಗೆ ಅವರ ಭೇಟಿಯ ನಂತರ ಸಿಎಂ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ ಎಂದಾಗ, “ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದವರು, ಕೆಪಿಸಿಸಿ ಅಧ್ಯಕ್ಷರು ಅವರನ್ನು ಗೌರವಯುತವಾಗಿ ಭೇಟಿಯಾಗಿದ್ದಾರೆ. ಭೇಟಿಯಾಗುವುದು ಪಕ್ಷದ ಶಿಸ್ತು” ಎಂದರು.

ಕಾಂಗ್ರೆಸ್ ಸರ್ಕಾರವನ್ನು ನಾವು ಬೀಳಿಸುವುದಿಲ್ಲ, ಅವರೇ ಕಿತ್ತಾಡಿಕೊಂಡು ಸರ್ಕಾರ ಬಿದ್ದು ಹೋಗುತ್ತದೆ ಎನ್ನುವ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದಾಗ, “ಅವರುಗಳು ಇದೇ ಗುಂಗಿನಲ್ಲಿರಲಿ” ಎಂದರು.
ಜಾತಿ ಗಣತಿ ಬಗ್ಗೆ ಕೇಳಿದಾಗ “ಇದರ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದು, ಸಚಿವ ಸಂಪುಟದ ಮುಂದಿಟ್ಟು ನಂತರ ಏನು ತೀರ್ಮಾನ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ” ಎಂದರು.

ವಿನಯ್ ಕುಲಕರ್ಣಿ ಅವರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದ ಬಗ್ಗೆ ಕೇಳಿದಾಗ, “ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದು ಹೇಳಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು