Monday, October 14, 2024

ಸತ್ಯ | ನ್ಯಾಯ |ಧರ್ಮ

ಬೌದ್ಧ ಧರ್ಮ ಸ್ವೀಕರಿಸುವುದಾಗಿ ಘೋಷಿಸಿದ ಸಚಿವ ಹೆಚ್.ಸಿ.ಮಹದೇವಪ್ಪ

ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ ಎನ್ನುವ ಮೂಲಕ ಬೌದ್ಧ ಧರ್ಮದ ಸೇರ್ಪಡೆಗೆ ತನ್ನ ತುಡಿತವನ್ನು ಸಚಿವ ಹೆಚ್.ಸಿ.ಮಹದೇವಪ್ಪ ಹೊರಹಾಕಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಸಚಿವರೂ ಆದ ಹೆಚ್.ಸಿ.ಮಹದೇವಪ್ಪನವರು ತಮ್ಮ X ಪೋಸ್ಟ್ ನಲ್ಲಿ ಹಾಕಿಕುವಂತೆ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವಾಗಿದೆ ಎಂದು ಹೇಳಿದ್ದಾರೆ.

ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page