ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ: ಡಿ.ಕೆ. ಸುರೇಶ್

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ: ಡಿ.ಕೆ. ಸುರೇಶ್

“ಕಾಂಗ್ರೆಸ್ ಪಕ್ಷ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯಿಸಿದರು.
ಕಾರ್ಯಕರ್ತರು ನಿಮ್ಮ ಸ್ಪರ್ಧೆಗೆ ಹೆಚ್ಚಿನ ಒತ್ತಡ ಹಾಕುತ್ತಿದ್ದಾರೆ, ಚನ್ನಪಟ್ಟಣದಲ್ಲಿ ಗೆಲ್ಲುವ ವಿಶ್ವಾಸವಿದೆಯೇ ಎಂದು ಕೇಳಿದ ಪ್ರಶ್ನೆಗೆ, “ನನ್ನ ಮುಕ್ತವಾದ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರಿಗೆ ತಿಳಿಸುತ್ತೇನೆ. ಅವರು ತೀರ್ಮಾನ ಮಾಡಿದ ನಂತರ ನಾನು ತೀರ್ಮಾನ ಮಾಡುತ್ತೇನೆ. ಪಕ್ಷದ ಆದೇಶವನ್ನು ನಾನು ಪಾಲಿಸಬೇಕು, ನಮ್ಮ ಮುಖಂಡರೂ ಪಾಲಿಸಬೇಕು” ಎಂದರು.

ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಚರ್ಚೆಯ ಬಗ್ಗೆ ಕೇಳಿದಾಗ, “ಯೋಗೇಶ್ವರ್ ಅವರು ಪರಿಷತ್ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು ಹಾಗೂ ಅದು ಅಂಗೀಕಾರವಾಗಿರುವ ಬಗ್ಗೆ ಮಾಧ್ಯಮಗಳ ಮೂಲಕ ತಿಳಿದಿದ್ದೇನೆ. ಅವರು ಪಕ್ಷೇತರರಾಗಿ ಸ್ಪರ್ಧೆ ಮಾಡುವುದಾಗಿ ಚನ್ನಪಟ್ಟಣದಲ್ಲಿ ಇಂದು ಸಭೆ ಮಾಡುತ್ತಿರುವುದು ಗೊತ್ತಿದೆ. ಇದರ ಹೊರತಾಗಿ ಅವರು ಕಾಂಗ್ರೆಸ್ ಸೇರುವ ಕುರಿತು ಯಾವುದೇ ವಿಚಾರ ಗೊತ್ತಿಲ್ಲ” ಎಂದು ತಿಳಿಸಿದರು.

ಸೋಮವಾರ ರಾತ್ರಿ ರಾಮನಗರ ಜಿಲ್ಲಾ ಮುಖಂಡರ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎಂದು ಕೇಳಿದಾಗ, “ನಮ್ಮ ಪಕ್ಷದ ಮುಂದಿನ ನಡೆ ಹೇಗಿರಬೇಕು ಎಂದು ಜಿಲ್ಲೆ ಶಾಸಕರು ಹಾಗೂ ಮುಖಂಡರ ಜತೆ ನಾವು ಚರ್ಚೆ ಮಾಡಿದ್ದು, ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದ್ದು, ಪಕ್ಷದಿಂದಲೇ ಹೋರಾಟ ಮಾಡಬೇಕು ಎಂದು ಸಲಹೆ ನೀಡಿದ್ದಾರೆ” ಎಂದು ಮಾಹಿತಿ ನೀಡಿದರು.

ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸುರೇಶ್ ಅವರು ಸ್ವಾಗತಿಸುತ್ತಾರಾ ಎಂಬ ಪ್ರಶ್ನೆಗೆ, “ಚನ್ನಪಟ್ಟಣದಲ್ಲಿ ಕಳೆದ ಮೂರು ತಿಂಗಳಿನಿಂದ ಜೆಡಿಎಸ್ ಹಾಗೂ ಬಿಜೆಪಿಯಿಂದ ಬರುವ ಎಲ್ಲಾ ಮುಖಂಡರನ್ನು ನಾವು ಸ್ವಾಗತಿಸಿದ್ದೇವೆ. ಪಕ್ಷದ ತತ್ವ ಸಿದ್ಧಾಂತ, ನಾಯಕತ್ವ ಒಪ್ಪಿ ಬರುವವರಿಗೆ ಸ್ವಾಗತವಿದೆ. ಯೋಗೇಶ್ವರ್ ಅಥವಾ ಮತ್ತೊಬ್ಬರು ಎಂದು ಪ್ರತ್ಯೇಕಿಸಿ ಹೇಳುವುದಿಲ್ಲ. ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ವಿಚಾರ ನನ್ನ ಮುಂದೆ ಇಲ್ಲ. ಅವರು ಹಿರಿಯ ನಾಯಕರು ಮಾಜಿ ಸಚಿವರು, ಸಾಕಷ್ಟು ಅನುಭವ ಇರುವವರು. ಅವರ ಎನ್ ಡಿಎ ಮೈತ್ರಿ ಗಟ್ಟಿಯಾಗಿದ್ದು, ಅವರು ಯಾವ ತೀರ್ಮಾನ ಮಾಡುತ್ತಾರೆ ಕಾದು ನೋಡೋಣ” ಎಂದು ತಿಳಿಸಿದರು.

ಯೋಗೇಶ್ವರ್ ಅವರು ಪಕ್ಷಕ್ಕೆ ಸೇರುವುದಾದರೆ ಯಾವಾಗ ಸೇರಬಹುದು ಎಂದು ಕೇಳಿದಾಗ, “ನೀವು ಯಾವಾಗ ಹೇಳುತ್ತೀರೋ ಆಗ ಬರುತ್ತಾರೆ” ಎಂದರು.

ಗುರುವಾರ ಯೋಗೇಶ್ವರ್ ಅವರು ಸೇರ್ಪಡೆಯಾಗಲಿದ್ದಾರೆ ಎಂದು ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, “ಚನ್ನಪಟ್ಟಣದ ಕಾರ್ಯಕರ್ತರು ನನಗೆ ಕರೆ ಮಾಡಿ ಯೋಗೇಶ್ವರ್ ಅವರು ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸಭೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಈ ಸಭೆಯ ವಾಸ್ತವಾಂಶ ಏನು ಎಂದು ಸಂಜೆಯ ಒಳಗಾಗಿ ತಿಳಿಯಲಿದೆ” ಎಂದು ತಿಳಿಸಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು