Wednesday, October 23, 2024

ಸತ್ಯ | ನ್ಯಾಯ |ಧರ್ಮ

ಡಿಕೆ ಶಿವಕುಮಾರ್ ಮನೆಯಲ್ಲಿ ಸಿಪಿ ಯೋಗೇಶ್ವರ್ ಪ್ರತ್ಯಕ್ಷ ; ಕಾಂಗ್ರೆಸ್ ಬಿ ಫಾರಂ ಬಹುತೇಕ ಯೋಗೇಶ್ವರ್ ಮಡಿಲಿಗೆ

ಚನ್ನಪಟ್ಟಣ ಉಪಚುನಾವಣೆ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿದ್ದ ಯೋಗೇಶ್ವರ್ ಈಗ ಅಚ್ಚರಿಯ ಬೆಳವಣಿಗೆಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷದ ಆಗದ್ದಾರೆ. NDA ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದ ಸಿ.ಪಿ.ಯೋಗೇಶ್ವರ್ ಗೆ ಕಾಂಗ್ರೆಸ್ ಬಹಿರಂಗ ಆಹ್ವಾನ ನೀಡಿದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪ್ರತ್ಯಕ್ಷರಾಗಿ ಮೈತ್ರಿ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕ ಪ್ರಹಸನಕ್ಕೆ ಬಹುತೇಕ ತೆರೆಬಿದ್ದಂತಾಗಿದೆ. ಸಿ.ಪಿ.ಯೋಗೇಶ್ವರ್ ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ್ದಾರೆ. ಕೆಲ ಕಾಲ ಚರ್ಚೆ ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ಬಿಜೆಪಿ-ಜೆಡಿಎಸ್ ನಾಯಕರಿಗೆ ಟಕ್ಕರ್ ಕೊಡಲು ಸಜ್ಜಾಗಿದ್ದಾರೆ.

ಸಿ.ಪಿ. ಯೋಗೀಶ್ವರ್ ಅವರನ್ನು ಡಿಕೆ ಶಿವಕುಮಾರ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page