ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖ್ಯಾತ ಚಿಂತಕರು, ಲೇಖಕರಾದ ಪ್ರೊಫೆಸರ್ ಗಂಗಾಧರ ಮೂರ್ತಿಯವರ ನಿಧನ

PPeepal Media

Peepal Media ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಖ್ಯಾತ ಚಿಂತಕರು, ಲೇಖಕರಾದ ಪ್ರೊಫೆಸರ್ ಗಂಗಾಧರ ಮೂರ್ತಿಯವರ ನಿಧನ

ಕನ್ನಡದ ಖ್ಯಾತ ಲೇಖಕರು, ಚಿಂತಕರಾದ ಪ್ರೊ.ಗಂಗಾಧರ ಮೂರ್ತಿಯವರು ಇಂದು ಸಂಜೆ 5.30 ಕ್ಕೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಲ್ಲಿ ನಿನ್ನೆ ಸೆ. 9 ರ ಮಧ್ಯಾಹ್ನದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು‌. ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಅಸುನೀಗಿದ್ದಾರೆ.

77 ವರ್ಷದ ಗಂಗಾಧರ ಮೂರ್ತಿಯವರು ಗೌರಿಬಿದನೂರಿನ ನ್ಯಾಷನಲ್ ಕಾಲೇಜಿನ ಇಂಗ್ಲಿಷ್ ವಿಭಾಗದಲ್ಲಿ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಶ್ರೀಯುತರು ಕಳೆದ ನಾಲ್ಕು ದಶಕಗಳಿಂದ ದಲಿತ ಸಾಹಿತ್ಯ, ಬಂಡಾಯ ಸಾಹಿತ್ಯ, ಜನ ಚಳುವಳಿ, ವಿಚಾರವಾದಿ ಚಳುವಳಿಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಬರಹಗಾರರಾಗಿ, ಅನುವಾದಕರಾಗಿ, ಸಂಪಾದಕರಾಗಿ ಕನ್ನಡ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಇವರು ‘ಭಾರತ ಜ್ಞಾನ ವಿಜ್ಞಾನ ಸಮಿತಿ’ಯು ಪ್ರಕಟಿಸಿರುವ ಮಾಸ ಪತ್ರಿಕೆಗೆ ಕಳೆದ 12 ವರ್ಷಗಳಿಂದ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.

1938 ರ ಧ್ವಜ ಸತ್ಯಾಗ್ರಹ ಹತ್ಯಾಕಾಂಡದ ನಂತರ ‘ಕರ್ನಾಟಕದ ಜಲಿಯನ್ ವಾಲಾಭಾಗ್’ ಎಂದೇ ಕರೆಯಲಾಗುವ ವಿದುರಾಶ್ವತ್ಥದಲ್ಲಿ ರೂಪುಗೊಳ್ಳುತ್ತಿರುವ ಸ್ವತಂತ್ರ್ಯ ಸ್ಮಾರಕ ಸಂಕೀರ್ಣದ ಪರಿಕಲ್ಪನೆ ಮತ್ತು ವಿನ್ಯಾಸಕಾರರಾಗಿ ಭಾರತದ ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ಚಿತ್ರಪಟ ಗ್ಯಾಲರಿ ಮತ್ತು ಥೀಮ್ ಗ್ರಂಥಾಲಯ ರೂಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದ ಹಲವು ಮುಖಗಳನ್ನು ಅನಾವರಣಗೊಳಿಸುವ ಆ ಸ್ಮಾರಕ ದೇಶದಲ್ಲೇ ಅಪರೂಪದ ಸ್ಮಾರಕವಾಗಿ ಖ್ಯಾತಿ ಪಡೆದಿದೆ. ಗೌರಿಬಿದನೂರಿನ ಹೊಸ ತಹಶೀಲ್ದಾರ್ ಕಚೇರಿಯ ಪಕ್ಕದಲ್ಲಿ ಅಂಬೇಡ್ಕರ್ ನೆನಪಿನಲ್ಲಿ ‘ಸಮಾನತಾ ಸೌಧ’ವನ್ನು ರೂಪಿಸಿದ್ದು ಅವರ ಮತ್ತೊಂದು ಅವಿಸ್ಮರಣೀಯ ಕೆಲಸವಾಗಿದೆ. ಸಾಮಾಜಿಕ ಸಮಾನತೆಗಾಗಿ ದುಡಿಯುವ, ಮಿಡಿಯುವ ಪ್ರತಿಯೊಬ್ಬರೂ ಒಮ್ಮೆಯಾದರೂ ಭೇಟಿ ಕೊಡಲೇಬೇಕಾದ ಸ್ಥಳ ಅದು. ವಿದ್ಯಾರ್ಥಿಗಳಿಗೆ ಪ್ರೀತಿಯ ಮೇಷ್ಟ್ರಾಗಿದ್ದ ಅವರು ಅತ್ಯಂತ ಜನಪ್ರಿಯ ಅಧ್ಯಾಪಕರಾಗಿದ್ದರು.

ಪ್ರೊ.ಗಂಗಾಧರ ಮೂರ್ತಿಯವರು ಲೇಖಕರಾಗಿಯೂ ಮಹತ್ವದ ಕೆಲಸ ಮಾಡಿದ್ದಾರೆ. ಹೂ ಅರಳುವಂಥ ಮಣ್ಣು (ಕವನ ಸಂಕಲನ), ನಾಗಸಂದ್ರ ಭೂ ಆಕ್ರಮಣ ಚಳವಳಿ, ಭಾರತದ ಬೌದ್ಧಿಕ ದಾರಿದ್ರ್ಯ(ಅನುವಾದ), ಭಾರತೀಯ ಸಮಾಜದ ಜಾತಿ ಲಕ್ಷಣ (ಅನುವಾದ), ಅಂಬೇಡ್ಕರ್ ಮತ್ತು ಮುಸ್ಲಿಮರು (ಅನುವಾದ), ವಸಾಹತುಪೂರ್ವ ಕಾಲದ ಜಾತಿಹೋರಾಟಗಳು, ಹಿಂದುತ್ವ ಮತ್ತು ದಲಿತರು, ಸೂಫಿ ಕಥಾಲೋಕ, ಭಾರತದ ಸ್ವಾತಂತ್ರ್ಯ ಚಳವಳಿಯ ಪ್ರಧಾನೇತರ ಹೋರಾಟಗಳು ಮುಂತಾದ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಮತ್ತು ಅಸಂಖ್ಯಾತ ಶಿಷ್ಯರನ್ನು ಅಗಲಿದ್ದಾರೆ.. ಇಂದು ಸಂಜೆ ಮೃತರ ಪಾರ್ಥಿವ ಶರೀರ ಗೌರಿಬಿದನೂರಿಗೆ ತಂದು ನಾಳೆ ಮಧ್ಯಾಹ್ನದ ವೇಳೆಗೆ ಅಂತಿಮ ಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ‌.

PPeepal Media

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು