Friday, May 23, 2025

ಸತ್ಯ | ನ್ಯಾಯ |ಧರ್ಮ

ರಾಜ್ಯದ ಎಲ್ಲಾ ಶಾಲೆಗಳಲ್ಲಿ “ಕರ್ನಾಟಕ ರಾಜ್ಯೋತ್ಸವ” ಆಚರಣೆ ಕಡ್ಡಾಯ

ನವೆಂಬರ್ 1 ರ ಕರ್ನಾಟಕ ರಾಜ್ಯೋತ್ಸವದ ವಿಶೇಷವಾಗಿ ನಾಳೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ನಾಳೆ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದು 70 ವರ್ಷವಾದ ವಿಶೇಷದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಅಷ್ಟೇ ಅಲ್ಲದೆ, ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ ಹೊರಡಿಸಿ ಸೂಚನೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page