ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಆರ್‌.ಅಶೋಕ

ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಆರ್‌.ಅಶೋಕ

ಹದಿನಾರು ತಿಂಗಳಲ್ಲಿ ಚನ್ನಪಟ್ಟಣದ ಅಭಿವೃದ್ಧಿಗೆ ಒಂದು ಹಿಡಿ ಮಣ್ಣು ನೀಡಲು ಕೂಡ ಕಾಂಗ್ರೆಸ್‌ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಸರ್ಕಾರದಲ್ಲಿ ಲೂಟಿ ಬಿಟ್ಟರೆ ಬೇರೆ ಏನೂ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು.

ಚನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿ.ಪಿ.ಯೋಗೇಶ್ವರ್‌ ಅವರಿಗೆ ಟಿಕೆಟ್‌ ನೀಡಲು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿತ್ತು. ನಾನು ಯಾವುದೇ ಪಕ್ಷದಿಂದಲೂ ಸ್ಪರ್ಧಿಸುತ್ತೇನೆಂದು ಯೋಗೇಶ್ವರ್‌ ಹೇಳಿದ್ದರು. ಜೆಡಿಎಸ್‌ನಿಂದ ಸ್ಪರ್ಧಿಸಿ ಎಂದು ಹೇಳಿದಾಗ, ದಿಢೀರನೆ ಮನಸ್ಸು ಬದಲಿಸಿ ಬಿಜೆಪಿಯಿಂದಲೇ ಟಿಕೆಟ್‌ ಬೇಕು ಎಂದು ಪಟ್ಟು ಹಿಡಿದಿದ್ದರು. ಬಿಜೆಪಿಯಿಂದಲೇ ಸ್ಪರ್ಧಿಸುವ ಬಗ್ಗೆ ಚರ್ಚಿಸುವ ಮುನ್ನವೇ ಮ್ಯಾಚ್‌ ಫಿಕ್ಸಿಂಗ್‌ ಆಗಿತ್ತು. ಬಿಜೆಪಿಯಿಂದ ಸ್ಪರ್ಧಿಸಲು ತೀರ್ಮಾನಿಸಿದ್ದರೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಯಾಕೆ ನೀಡಬೇಕಿತ್ತು? ಇವೆಲ್ಲ ಪೂರ್ವ ನಿಯೋಜಿತ. ಕುಮಾರಸ್ವಾಮಿ ಮೋಸ ಮಾಡಿದ್ದಾರೆಂದು ಯೋಗೇಶ್ವರ್‌ ಆಪಾದನೆ ಮಾಡುತ್ತಿದ್ದಾರೆ. ಇವರೆಲ್ಲರೂ ಮೊದಲೇ ಮಾತಾಡಿಕೊಂಡು ಈಗ ಆರೋಪ ಮಾಡುತ್ತಿದ್ದಾರೆ ಎಂದರು.

16 ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಚನ್ನಪಟ್ಟಣದ ಒಂದೇ ಒಂದು ಅಭಿವೃದ್ಧಿ ಕಾಮಗಾರಿಗೆ ಹಿಡಿ ಮಣ್ಣು ಹಾಕಿಲ್ಲ. ಗ್ಯಾರಂಟಿಗಳಿಂದಾಗಿ ಮಣ್ಣು ಹಾಕಲು ಕೂಡ ಹಣವಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಇಲ್ಲಿಗೆ ಮೊದಲು ನೀರಾವರಿ ಯೋಜನೆ ತಂದರು. ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ ಹಾಗೂ ಬಸವರಾಜ ಬೊಮ್ಮಾಯಿ ಅನುದಾನ ನೀಡಿದರು. ಚನ್ನಪಟ್ಟಣಕ್ಕೆ ಯೋಗೇಶ್ವರ್‌ ಅವರ ಕೊಡುಗೆ ಏನೂ ಇಲ್ಲ ಎಂದರು.

ಮೊದಲಿಗೆ ನಾನೇ ಅಭ್ಯರ್ಥಿ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡರು. ಆದರೆ ಅವರು ಅಭ್ಯರ್ಥಿಯಾಗಲಿಲ್ಲ. ಜಿಲ್ಲಾ ಉಸ್ತುವಾರಿಯ ಹೊಣೆಯನ್ನೂ ವಹಿಸಿಕೊಳ್ಳಲಿಲ್ಲ. ಡಿ.ಕೆ.ಶಿವಕುಮಾರ್‌ ರೈತರ ಬಗ್ಗೆ ಮಾತನಾಡುವುದಾದರೆ ಮೊದಲು ಸಾಲ ಮನ್ನಾ ಮಾಡಲಿ. ರೈತರ ವಿದ್ಯಾಭ್ಯಾಸಕ್ಕೆಂದು ನೀಡಿದ ವಿದ್ಯಾನಿಧಿ ಯೋಜನೆಯನ್ನು ನೀಡಲಿ. ಅದನ್ನು ಬಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಹಣ ಲೂಟಿ ಮಾಡಿದ್ದಾರೆ ಎಂದು ದೂರಿದರು.

ಕಾಂಗ್ರೆಸ್‌ ಸರ್ಕಾರ 10 ಕೆಜಿ ಅಕ್ಕಿ ಎಂದು ಘೋಷಿಸಿ ಅದನ್ನು ನೀಡಿಲ್ಲ. 5 ಕೆಜಿ ಅಕ್ಕಿಯನ್ನು ಪ್ರಧಾನಿ ನರೇಂದ್ರ ಮೋದಿ ನೀಡುತ್ತಿದ್ದಾರೆ. ರಾಜ್ಯದ ಎಲ್ಲ ಜಮೀನುಗಳನ್ನು ವಕ್ಫ್‌ ಮಂಡಳಿ ಕಬಳಿಸುತ್ತಿದೆ. ಶಾಲೆ, ದೇವಸ್ಥಾನ ಸೇರಿದಂತೆ ಎಲ್ಲ ಜಾಗಗಳನ್ನು ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಹಿಂದೂಗಳು ಮಾತ್ರವಲ್ಲದೆ, ಮುಸ್ಲಿಮರು ಕೂಡ ಇದರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಈ ಕುರಿತು ವಕ್ಫ್‌ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಗೆ ತಿಳಿಸಿದ್ದು, ಇದೇ ತಿಂಗಳ 7 ರಂದು ಸಮಿತಿ ಭೇಟಿ ನೀಡಲಿದೆ ಎಂದರು.

ಅಧಿಕಾರಿ ಆತ್ಮಹತ್ಯೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ. ಹಣ ನೀಡಿದರೆ ಮಾತ್ರ ಇಲ್ಲಿ ಬದುಕಲು ಸಾಧ್ಯ. ಏನೇ ಕೇಳಿದರೂ ಎಸ್‌ಐಟಿ ರಚನೆ ಎಂದು ಹೇಳುತ್ತಾರೆ. ಯಾರು ಸತ್ತರೂ ಎಸ್‌ಐಟಿ ರಚನೆ ಮಾಡುತ್ತಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರ ಪಿಎ ಸೋಮು ಅವರಿಂದಾಗಿ ಅಧಿಕಾರಿ ಸತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಇದಕ್ಕಾಗಿ ಎಸ್‌ಐಟಿ ರಚನೆ ಮಾಡಲಿ. ಅಧಿಕಾರಿಗಳು ಯಾಕೆ ಸಾಯುತ್ತಿದ್ದಾರೆ, ಯಾರು ಎಷ್ಟು ಲಂಚ ಕೇಳುತ್ತಿದ್ದಾರೆ ಎಂದು ಜನರಿಗೆ ತಿಳಿಯಲಿ. . ಸರ್ಕಾರದ ಬಂಡವಾಳ ಬಯಲಾಗಲು ಎಸ್‌ಐಟಿ ಬೇಕಿದೆ ಎಂದು ಆಗ್ರಹಿಸಿದರು.

ಅಧಿಕಾರಿಗಳು ಭಯಕ್ಕೊಳಗಾದರೆ ವಸೂಲಿ ಇನ್ನಷ್ಟು ಹೆಚ್ಚಾಗುತ್ತದೆ. ಯಾರೂ ಧೈರ್ಯ ಕಳೆದುಕೊಳ್ಳಬಾರದು ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಹಗರಣ ನಡೆದಿದೆ ಎಂಬ ಪತ್ರ ರಾಜ್ಯಪಾಲರಿಗೆ ಪತ್ರ ಬಂದಿದೆ. ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ಮಿತಿ ಮೀರಿದೆ. ಈ ಉಪಚುನಾವಣೆಯಲ್ಲಿ ಜನರು ಈ ಸರ್ಕಾರಕ್ಕೆ ಬುದ್ಧಿ ಕಲಿಸಬೇಕು ಎಂದರು.

ಲೋಕಾಯುಕ್ತದಿಂದ ಸಿದ್ದರಾಮಯ್ಯನವರ ಪತ್ನಿಗೆ ನೋಟಿಸ್‌ ನೀಡಲಾಗಿದೆ. ಮೊದಲಿಗೆ ಆರೋಪಿ 1 ಗೆ ನೋಟಿಸ್‌ ನೀಡಬೇಕಿತ್ತು. ಇವೆಲ್ಲವೂ ಒಂದು ನಾಟಕ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ದೂರುದಾರರು ಅಪೀಲು ಮಾಡಿದ್ದಾರೆ. ಆರೋಪಿ 2 ಗೆ ಮೊದಲಿಗೆ ನೋಟಿಸ್‌ ನೀಡಿದ್ದು ಏಕೆಂದು ನಮಗೂ ಅರ್ಥವಾಗುತ್ತಿಲ್ಲ ಎಂದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು