ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

78 ವರ್ಷದ ಸಿದ್ದರಾಮಯ್ಯ ಅವರು 28 ವರ್ಷದ ಯುವಕನ ರೀತಿಯಲ್ಲಿ ದಿನಕ್ಕೆ 12-14 ಗಂಟೆ ಕೆಲಸ ಮಾಡುತ್ತಿದ್ದಾರೆ: ಸಚಿವ ಸಂತೋಷ್ ಲಾಡ್

PPeepal Media

Peepal Media • ರಾಜ್ಯ

• 1 ನಿಮಿಷದ ಓದು

78 ವರ್ಷದ ಸಿದ್ದರಾಮಯ್ಯ ಅವರು 28 ವರ್ಷದ ಯುವಕನ ರೀತಿಯಲ್ಲಿ ದಿನಕ್ಕೆ 12-14 ಗಂಟೆ ಕೆಲಸ ಮಾಡುತ್ತಿದ್ದಾರೆ: ಸಚಿವ ಸಂತೋಷ್ ಲಾಡ್

ಸಂಡೂರು ನ 9: ಬಿಜೆಪಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಕುನ್ಹಾ ಅವರ ತನಿಖಾ ಆಯೋಗ ಪತ್ತೆ ಹಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಮೆಟ್ರಿಕಿ ಗ್ರಾಮದಲ್ಲಿ ಬೃಹತ್ ಜನಸಮಾವೇಶವದಲ್ಲಿ ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ನಮ್ಮ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ಯವರನ್ನು ಯಾವ ದೇವರೂ ಕ್ಷಮಿಸಲ್ಲ. ನೀವೂ ಕ್ಷಮಿಸಬೇಡಿ ಎಂದು ಜನರಿಗೆ ಕರೆ ನೀಡಿದರು.

ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲಾ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ ಎಂದರು.

ಆಗ ಇಂದಿರಾಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ ಎಂದು ಟೀಕಿಸಿದರು.

ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೇ ನಿಮಗೆ ನೆನಪಾಗ್ತಿಲ್ಲ.

ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿ ಶ್ರೀರಾಮುಲು ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಿ ಎಂದು ನ್ಯಾ.ಕುನ್ಹಾ ಅವರ ತನಿಖಾ ಆಯೋಗ ಪತ್ತೆ ಹಚ್ಚಿದೆ. ಹಿಂದೆ ಜನಾರ್ದನರೆಡ್ಡಿಯವರ ಟೀಮು ನಡೆಸಿದ್ದ ಭ್ರಷ್ಟಾಚಾರವನ್ನು ಲೋಕಾಯುಕ್ತ ಸಂತೋಷ್ ಹೆಗ್ಡೆಯವರು ಬಯಲಿಗೆ ಎಳೆದಿದ್ದರು. ಇವರು ಅಧಿಕಾರಕ್ಕೆ ಬರೋದೇ ಲೂಟಿ ಮಾಡೋದಕ್ಕೆ ಎಂದರು.

ಆದ್ದರಿಂದ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿ ಅಭಿವೃದ್ಧಿಗೆ ನಿಮ್ಮ ಬೆಂಬಲ ನೀಡಿ ಎಂದರು.

ಮೂರು ದಿನಗಳಿಂದ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಸಂಡೂರು ಕ್ಷೇತ್ರದಲ್ಲೇ , ಸಂಡೂರು ಜನರ ಮನೆ ಬಾಗಿಲಿಗೇ ಬಂದು ಮತ ಕೇಳುತ್ತಿದ್ದಾರೆ. ನಮ್ಮ ತಂದೆ ಸಮಾನರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಪೂರ್ಣಮ್ಮ ಅವರಿಗೆ ಆಶೀರ್ವಾದ ಮಾಡಿ ಅಂತ ಕೇಳುತ್ತಿದ್ದಾರೆ. ಇವರ ಮಾತು ನೆರವೇರಿಸಿ ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸಿ.

- ಸಂತೋಷ್‌ ಲಾಡ್
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು