Friday, November 15, 2024

ಸತ್ಯ | ನ್ಯಾಯ |ಧರ್ಮ

ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಿಎಂ, ಡಿಸಿಎಂ ಅಬ್ಬರದ ಪ್ರಚಾರ

ಕರ್ನಾಟಕದ ಉಪಚುನಾವಣೆ ಬಳಿಕ ಇದೀಗ ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬುಲಾವ್ ಬಂದಿದ್ದು, ಚುನಾವಣಾ ಅಖಾಡಕ್ಕೆ ಇಂದಿನಿಂದಲೇ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಾರಾಷ್ಟ್ರದ ಜತ್ ವಿಧಾನಸಭಾ ಕ್ಷೇತ್ರದಾದ್ಯಂತ ಪ್ರಚಾರ ಮಾಡಿದರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭೀವಂಡಿ, ಚಾಂಡಿವಾಲಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಅಬ್ಬರದ ಮತಬೇಟೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಚಾರ ಮುಗಿಸಿ ಮತ್ತೆ ಬೆಂಗಳೂರಿಗೆ ವಾಪಸಾಗಲಿದ್ದಾರೆ, ನಾಳೆ(ನವೆಂಬರ್ 16) ಸೊಲ್ಲಾಪುರಕ್ಕೆ ತೆರಳಲಿದ್ದಾರೆ, ನಾಡಿದ್ದು ಮತ್ತೆ ಸರಣಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಜಾಟ್, ಅಕ್ಕಾಲ್ಕೋಟ್,ಸೊಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಾಡಿದ್ದು, ಲಾಥೂರ್ ಕ್ಷೇತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರಚಾರ ಮಾಡಲಿದ್ದಾರೆ.

ಇಂದು ಬೆಳಗ್ಗೆ 9.55ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮುಂಬೈಗೆ ತೆರಳಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮುಂಬೈ ಏರ್ಪೋರ್ಟ್​ಗೆ ತಲುಪಲಿದ್ದಾರೆ. ಅಲ್ಲಿಂದ ರಸ್ತೆಯ ಮೂಲಕ ಸಾಗಿ ಮುಂಬೈ ವೆಸ್ಟ್ ವಿಧಾನಸಭಾ ಕ್ಷೇತ್ರವಾದಂತ ಭೀವಂಡಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಮಹಾರಾಷ್ಟ್ರದಲ್ಲಿ ಎಂವಿಎ ಮೈತ್ರಿಯೊಂದಿಗೆ ಕಾಂಗ್ರೆಸ್​, ಶಿವಸೇನಾ (ಯುಬಿಟಿ) ಮತ್ತು ನ್ಯಾಷನಲ್​ ಕಾಂಗ್ರೆಸ್​ ಪಕ್ಷ (ಎಸ್​ಪಿ) ಸ್ಪರ್ಧಿಸುತ್ತಿದೆ. ನವೆಂಬರ್​ 20ರಂದು ಮಹಾರಾಷ್ಟ್ರದಲ್ಲಿ ಮತದಾನ ನಡೆಯಲಿದ್ದು, ನವೆಂಬರ್​ 23ಕ್ಕೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರಚಾರ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page