Friday, June 14, 2024

ಸತ್ಯ | ನ್ಯಾಯ |ಧರ್ಮ

ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ  ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದ್ದು, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಈ ವೇಳೆ ಸಂತ್ರಸ್ತೆಯರು ಕೋರ್ಟ್‌ಗೆ ಹಾಜರಾಗಲಿದ್ದು, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ನ್ಯಾಯಲಯ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸಹ ಕೋರ್ಟ್ ನಾಳೆಗೆ ಮುಂದೂಡಿದೆ.

Related Articles

ಇತ್ತೀಚಿನ ಸುದ್ದಿಗಳು