Tuesday, November 19, 2024

ಸತ್ಯ | ನ್ಯಾಯ |ಧರ್ಮ

ನಕ್ಸಲ್ ವಿರೋಧಿ ಕಾರ್ಯಾಚರಣೆ: ಚೀಫ್ ಕಮಾಂಡರ್ ವಿಕ್ರಮ್ ಗೌಡ ಎನ್ಕೌಂಟರ್

ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸೀತಾಂಬೈಲು ಪ್ರದೇಶದಲ್ಲಿರುವ ಹೆಬ್ರಿ ಕಬ್ಬಿನಾಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಕಮಾಂಡರ್ ವಿಕ್ರಮ್ ಗೌಡ ಹತರಾಗಿದ್ದಾರೆ.

ವಿಕ್ರಮ್ ಗೌಡ ಇತ್ತೀಚಿನ ದಿನಗಳಲ್ಲಿ ಶೃಂಗೇರಿ, ನರಸಿಂಹರಾಜಪುರ, ಕಾರ್ಕಳ ಮತ್ತು ಉಡುಪಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ನಕ್ಸಲೀಯ ಚಟುವಟಿಕೆಯನ್ನು ಹೆಚ್ಚಿಸಿವೆ ಎಂದು ವರದಿಯಾಗಿತ್ತು. ಸಧ್ಯ ನಕ್ಸಲ್ ನಿಗ್ರಹ ಪಡೆಗಳಿಂದ ತೀವ್ರಗೊಂಡ ಕೂಂಬಿಂಗ್ ಕಾರ್ಯಾಚರಣೆಯಲ್ಲಿ ವಿಕ್ರಮ್ ಗೌಡ ಹತರಾಗಿದ್ದಾರೆ.

ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್​ಕೌಂಟರ್​ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.

ಇತ್ತೀಚೆಗೆ ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.

ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page