Thursday, November 28, 2024

ಸತ್ಯ | ನ್ಯಾಯ |ಧರ್ಮ

ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರ ೧೦೯ನೇ ಜನ್ಮಸ್ಮರಣೆ ಪುಷ್ಪ ನಮನ-ಅನ್ನ ದಾಸೋಹಕ್ಕೆ ಚಾಲನೆ

ಹಾಸನ: ನಗರದ ಮಹಾವೀರ ವೃತ್ತದ ಬಳಿ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿ ಯವರ ೧೦೯ ನೇ ಜನ್ಮಸ್ಮರಣೆಯ ಅಂಗವಾಗಿ ಪರಮಪೂಜ್ಯ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಗಳು ಸೇರಿದಂತೆ ವಿವಿಧ ಮಠದ ಸ್ವಾಮೀಜಿಗಳು ಸ್ವಾಮೀಜಿ ಬಾವಚಿತ್ರಕ್ಕೆ ಪುಷ್ಪ ನಮನ ಹಾಗೂ ದಾಸೋಹಕ್ಕೆ ಚಾಲನೆ ನೀಡಿದರು.
ನಂತರ ಸುತ್ತೂರು ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಗಳು ಉದ್ದೇಶಿಸಿ ಮಾತನಾಡಿ, ಸದಾಚಾರ, ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಹೊಂದಿರುವ ಶ್ರೀ ಸುತ್ತೂರು ಮಠವು ನಾಡಿನ ಪ್ರಸಿದ್ಧ ಮಠಗಳಲ್ಲಿ ಒಂದಾಗಿದ್ದು, ಮಠವು ಸಾಮಾಜಿಕ ಪ್ರಗತಿಯಲ್ಲಿ ಮಹತ್ವದ ಕೊಡುಗೆಯನ್ನು ನೀಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಸಾವಿರಾರು ವರ್ಷಗಳ ಇತಿಹಾಸವಿರುವ ನಮ್ಮ ದೇಶದಲ್ಲಿ ಶಾಂತಿ ನೆಲೆಸಬೇಕು. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರು ಸಮಾಜದಲ್ಲಿ ಶಾಂತಿ ನೆಲೆಸಲಿ. ಅಭಿವೃದ್ಧಿ ಆಗಲೆಂದು ಶಿಕ್ಷಣ ಸಂಸ್ಥೆ ಸ್ಥಾಪಿಸಿದರು. ಕಾಯಕ ಎನ್ನುವ ಸಾಮಾಜಿಕ ಸೇವೆಯನ್ನು ಆರಂಭಿಸಿದರು. ಸುತ್ತೂರು ಮಠದಲ್ಲಿ ಸಮಾಜದ ಅಭಿವೃದ್ಧಿಗಾಗಿ ಸೇವೆಯನ್ನು ಎಲ್ಲಾ ಜನಾಂಗದವರಿಗೂ ನೀಡಿದ್ದಾರೆ. ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ಮಾಡುವ ಮೂಲಕ ಸಮಾಜವನ್ನು ಸ್ವಾವಲಂಬಿಯನ್ನಾಗಿ ಮಾಡಲು, ಜೆಎಸ್‌ಎಸ್ ಮಹಾವಿದ್ಯಾಪೀಠವು ಸಾಮಾಜಿಕ ಸಮಾನತೆ, ಸಮೃದ್ಧಿ, ಶ್ರೇಷ್ಠತೆ, ಸಬಲೀಕರಣ, ಉದ್ಯಮಶೀಲತೆ ಮತ್ತು ಜ್ಞಾನೋದಯಕ್ಕಾಗಿ ಎಲ್ಲರಿಗೂ ಅಮೂಲ್ಯವಾದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದೆ. ಜೆ ಎಸ್ ಎಸ್ ಮಹಾವಿದ್ಯಾಪೀಠದ ಆಶ್ರಯದಲ್ಲಿ, ಅವರು ಅಕ್ಷರ ದಾಸೋಹಕ್ಕಾಗಿ ಶಾಲೆಗಳು ಮತ್ತು ಕಾಲೇಜುಗಳನ್ನು ಪ್ರಾರಂಭಿಸಿದರು. ಅನ್ನ ದಾಸೋಹಕ್ಕಾಗಿ ವಸತಿ ಮತ್ತು ಆರೋಗ್ಯ ದಾಸೋಹಕ್ಕಾಗಿ ಆಸ್ಪತ್ರೆಗಳನ್ನು ಪ್ರಾರಂಭಿಸಿರುವುದಾಗಿ ಹೇಳಿದರು.

  ಕಾರ್ಯಕ್ರಮದಲ್ಲಿ ಶ್ರೀ ಜವೇನಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಪುಷ್ಪಗಿರಿ ಮಹಾಸಂಸ್ಥಾನ ಮಠದ ಶ್ರೀ ಸೋಮಶೇಖರ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯ ಸಮಿತಿ ಸದಸ್ಯ ಬಿ.ಆರ್. ವಸಂತ ಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎನ್. ಪರಮೇಶ್, ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಶ್ರೀ ದೇವರಾಜು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page