Friday, November 29, 2024

ಸತ್ಯ | ನ್ಯಾಯ |ಧರ್ಮ

ದ್ವೇಷ ಭಾಷಣ : ಚಂದ್ರಶೇಖರ ಸ್ವಾಮಿ ವಿರುದ್ದ FIR ದಾಖಲು

ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು ನಿವಾಸಿ ಸೈಯದ್ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತ ಕಲಂ 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ಸಂಘ ನವೆಂಬರ್ 26 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಳಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮಿ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುವಾಗ ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ದೇಶದಲ್ಲಿ ವಕ್ಫ ಮಂಡಳಿಯೇ ಇಲ್ಲದಂತೆ ಮಾಡಿದ್ರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page