ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ:‌ ಸಿ ಎಮ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ:‌ ಸಿ ಎಮ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಜೊತೆಯಲ್ಲಿ ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರಿದ್ದರು

ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ.

ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು.

ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು.

ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ ಹಿಂದುಳಿದ ವರ್ಗಗಳ ಒಕ್ಕೂಟದ ಆಶ್ರಯದಲ್ಲಿ ಸ್ವಾಭಿಮಾನಿ ಸಮಾವೇಶ ಅಯೋಜಿಸಲಾಗಿದೆ.

ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನೂ ಸಂಘಟಕರು ಆಹ್ವಾನಿಸಿದ್ದಾರೆ.

ಸಮಾವೇಶ ಕುರಿತಂತೆ ಹೈಕಮಾಂಡ್ ಗೆ ಅನಾಮಧೇಯ ಪತ್ರ ಬರೆದಿರುವ ಬಗ್ಗೆ ಮಾಹಿತಿ ಇಲ್ಲ. ಖರ್ಗೆ ಅವರೂ ಈ ಬಗ್ಗೆ ಚರ್ಚೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು