Sunday, December 1, 2024

ಸತ್ಯ | ನ್ಯಾಯ |ಧರ್ಮ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಇಲ್ಲ: ಅರವಿಂದ್ ಕೇಜ್ರಿವಾಲ್

ಹೊಸದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.

ಅರವಿಂದ್ ಕೇಜ್ರಿವಾಲ್ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ದೆಹಲಿಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಸ್ಪಷ್ಟಪಡಿಸಿದರು.

ಏತನ್ಮಧ್ಯೆ, ಅರವಿಂದ್ ಕೇಜ್ರಿವಾಲ್ ತಮ್ಮ ಮೇಲೆ ಸ್ಪಿರಿಟ್ ದಾಳಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದರು. ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page