ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದು ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ; ಮೋದಿ ಹಾಜರು, ಮುಂದುವರೆದ ಶಿಂಧೆ ಗೊಂದಲ

PPeepal Media

Peepal Media ದೇಶ

• 1 ನಿಮಿಷದ ಓದು

ಇಂದು ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ; ಮೋದಿ ಹಾಜರು, ಮುಂದುವರೆದ ಶಿಂಧೆ ಗೊಂದಲ

ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬಂದು 11 ದಿನಗಳ ನಂತರ, ಬುಧವಾರ ನಡೆದ ಪ್ರಮುಖ ಸಭೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಆಯ್ಕೆಯನ್ನು ಬಿಜೆಪಿ ನಾಯಕತ್ವವು ಅಂತಿಮಗೊಳಿಸಿದೆ.

ಇಂದು ಸಂಜೆ ಮುಂಬೈನ ಆಜಾದ್ ಮೈದಾನದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮಹಾರಾಷ್ಟ್ರದ 21ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಇಂದು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರೊಂದಿಗೆ ಆಜಾದ್ ಮೈದಾನ ತಲುಪಲಿದ್ದಾರೆ.

ಮಹಾಯುತಿ ಮುಖ್ಯಮಂತ್ರಿಯಾಗಿ ನಾಮನಿರ್ದೇಶನಗೊಂಡ ನಂತರ, ದೇವೇಂದ್ರ ಫಡ್ನವಿಸ್ ಅವರು ಇಂದು (ಡಿಸೆಂಬರ್ 5) ಸಂಜೆ 5.30 ಕ್ಕೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.

ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಬೆಂಬಲ ಪತ್ರ ನೀಡಿದ್ದರೂ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೋ ಇಲ್ಲವೋ ಎಂಬ ಗೊಂದಲದಲ್ಲಿ ಏಕನಾಥ್ ಶಿಂಧೆ ಸಂಜೆವರೆಗೂ ಇದ್ದರು. ಆದರೆ ಬಿಜೆಪಿಯ ಹಲವು ಮೂಲಗಳು ಫಡ್ನವೀಸ್ ಅವರೊಂದಿಗೆ ಸಂಜೆ ನಡೆಸಿದ ಮಾತುಕತೆ ಸಕಾರಾತ್ಮಕವಾಗಿತ್ತು ಎಂದು ಹೇಳುತ್ತವೆ.

ಫಡ್ನವೀಸ್ ಜೊತೆಗೆ ಅವರು ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗೃಹ ಸಚಿವಾಲಯದ ಜತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಳ್ಳಲು ಶಿಂಧೆ ಹಠ ಹಿಡಿದಿದ್ದಾರೆ ಎಂಬ ವಿಶ್ವಾಸಾರ್ಹ ಮಾಹಿತಿ ಇದೆ. ಇದಕ್ಕೆ ಪ್ರತಿಕ್ರಿಯಿಸಿದ ದೇವೇಂದ್ರ ಫಡ್ನವೀಸ್ ಶಿಂಧೆ ಅವರೊಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ರಾಜಭವನಕ್ಕೆ ತೆರಳುವ ಮುನ್ನ ಶಿಂಧೆ ಅವರ ಅಧಿಕೃತ ನಿವಾಸ ‘ವರ್ಷಾ’ಕ್ಕೆ ಭೇಟಿ ನೀಡಿ ಸರ್ಕಾರಕ್ಕೆ ಸೇರ್ಪಡೆಗೊಳ್ಳುವಂತೆ ಫಡ್ನವೀಸ್ ಅವರು ಶಿಂಧೆ ಅವರ ಬೇಡಿಕೆಗಳನ್ನು ಪರಿಹರಿಸಲು ಬಿಜೆಪಿ ಹೈಕಮಾಂಡ್‌ಗೆ ತಿಳಿಸುವುದಾಗಿ ಭರವಸೆ ನೀಡಿದರು.

ನಂತರ ರಾಜಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ನಾಳೆ ಸಂಜೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡುವುದಾಗಿ ಶಿಂಧೆ ಹೇಳಿದರು 2022 ರಲ್ಲಿ ಅವರು ಇಲ್ಲಿ ಮುಖ್ಯಮಂತ್ರಿಯಾಗಿದ್ದರು ಮತ್ತು ಈಗ ನಾವು ಅವರನ್ನು ಬೆಂಬಲಿಸುತ್ತಿದ್ದೇವೆ. ಒಗ್ಗಟ್ಟಿನಿಂದ ಒಳ್ಳೆಯ ಸರ್ಕಾರ ನಡೆಸೋಣ. ಸಂಜೆ, ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಶಿಂಧೆ ಅವರನ್ನು ಅವರ ನಿವಾಸಕ್ಕೆ ಭೇಟಿಯಾಗಲು ಹೋದರು. ಉಭಯ ನಾಯಕರ ನಡುವೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಯಿತು. ಆದರೆ ಆಗಲೂ ಶಿಂಧೆ ಅವರಿಂದ ಯಾವುದೇ ಖಚಿತ ಭರವಸೆ ಸಿಕ್ಕಿರಲಿಲ್ಲ. ಎನ್‌ಸಿಪಿ ಅಭ್ಯರ್ಥಿ ಅಜಿತ್ ಪವಾರ್ ಅವರು ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ.

PPeepal Media

Peepal Media

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು