Wednesday, December 11, 2024

ಸತ್ಯ | ನ್ಯಾಯ |ಧರ್ಮ

ವಿಹಿಂಪ ಸಭೆಯಲ್ಲಿ ಅಲಹಾಬಾದ್‌ ಹೈಕೋರ್ಟ್‌ ಜಡ್ಜ್ ಭಾಷಣ;‌ ವರದಿ ಕೇಳಿದ ಸುಪ್ರೀಂ ಕೋರ್ಟ್

ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಅವರು ನ್ಯಾಯಾಂಗ ನೀತಿಯನ್ನು ಉಲ್ಲಂಘಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಕುರಿತು ವರದಿ ಸಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ದ್ವೇಷಪೂರಿತ ಭಾಷಣ ಮಾಡಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

ಡಿಸೆಂಬರ್ 8 ರಂದು ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ವಿಎಚ್‌ಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಶೇಖರ್ ಕುಮಾರ್ ಮಾತನಾಡಿದರು. ಏಕರೂಪ ನಾಗರಿಕ ಸಂಹಿತೆಯ ಕುರಿತು ಅವರು ಭಾಷಣ ಮಾಡಿದ್ದರು. ಆದರೆ ಒಂದು ದಿನದ ನಂತರ, ಪ್ರಚೋದನಕಾರಿ ವಿಷಯಗಳ ಕುರಿತು ನ್ಯಾಯಾಧೀಶರು ಮಾಡಿದ ಭಾಷಣಗಳು ವೈರಲ್ ಆಗುತ್ತಿದ್ದಂತೆ, ಪ್ರತಿಪಕ್ಷಗಳು ಸೇರಿದಂತೆ ಹಲವೆಡೆ ವಿರೋಧ ವ್ಯಕ್ತವಾಯಿತು ಮತ್ತು ದ್ವೇಷಪೂರಿತ ಭಾಷಣ ಮಾಡಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page