Thursday, December 12, 2024

ಸತ್ಯ | ನ್ಯಾಯ |ಧರ್ಮ

ಮೃತ ಬಾಣಂತಿಯ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ, ಸಾಂತ್ವನ

ಬಳ್ಳಾರಿ,ಡಿ.12 :ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಾಣಂತಿ ನಂದಿನಿ ಅವರ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷೀ ಚೌದರಿ ಅವರು ಗುರುವಾರ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಮಕ್ಕಳಿಗೆ ಉನ್ನತ ಶಿಕ್ಷಣ, ಭದ್ರತೆ ಮತ್ತು ಮೃತ ಬಾಣಂತಿಯರ ಮಕ್ಕಳ ಜವಾಬ್ದಾರಿಯನ್ನು ಸರ್ಕಾರ ವಹಿಸುವಂತೆ, ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಇತರೆ ಸೌಲಭ್ಯ ಸರ್ಕಾರದಿಂದ ಒದಗಿಸಲಾಗುವುದು ಎಂದರು.

ಸರ್ಕಾರವು ಘೋಷಿಸಿದ ಪರಿಹಾರವನ್ನು ರೂ.2 ಲಕ್ಷದಿಂದ 5 ಲಕ್ಷದವರೆಗೆ ನೀಡಲು ಪರಿಷ್ಕರಿಸಿ ಆದೇಶಿಸಿದೆ. ಮಕ್ಕಳ ಆರೈಕೆ, ಸಮಗ್ರ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಧೈರ್ಯ ತುಂಬಿದರು.

ಇದಕ್ಕೂ ಮುನ್ನ ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆಗೆ ಆಗಮಿಸಿದ್ದ ಹೊರರೋಗಿಗಳೊಂದಿಗೆ ಮಾತನಾಡಿ, ಆರೋಗ್ಯ ವಿಚಾರಿಸಿದರು.

ನಂತರ ಮೋಕಾದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ದಾಸ್ತಾನು ಮಾಡಲಾಗಿರುವ ಆಹಾರ, ಮಕ್ಕಳಿಗೆ ವಿತರಿಸಿರುವ ಆಹಾರ, ಮಕ್ಕಳ ಆರೋಗ್ಯ ಮತ್ತು ಮಕ್ಕಳ ಹಾಜರಾತಿ ಕುರಿತಂತೆ ಮಾಹಿತಿ ಪಡೆದುಕೊಂಡರು.

ಮೆನು ಪ್ರಕಾರ ಮಕ್ಕಳಿಗೆ ಆಹಾರ ನೀಡಬೇಕು. ಅಂಗನವಾಡಿ ಕೇಂದ್ರದಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ತಹಶೀಲ್ದಾರ ಗುರುರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page