Friday, December 13, 2024

ಸತ್ಯ | ನ್ಯಾಯ |ಧರ್ಮ

ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಮಗು ಸೇರಿದಂತೆ ಆರು ಮಂದಿ ಸಾವು

ಚೆನ್ನೈ: ತಮಿಳುನಾಡಿನ ದಿಂಡಿಗಲ್ ಬಳಿ ಗುರುವಾರ ರಾತ್ರಿ ದುರಂತವೊಂದು ನಡೆದಿದೆ. ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಅಪ್ರಾಪ್ತ ಬಾಲಕ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಆರೂ ಮಂದಿ ಲಿಫ್ಟ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮತ್ತು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಈ ಆಸ್ಪತ್ರೆಯು ತಿರುಚ್ಚಿ ರಸ್ತೆಯಲ್ಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಧಾವಿಸಿವೆ. ಚಿಕಿತ್ಸೆ ಪಡೆಯುತ್ತಿರುವ ಇತರ 30 ರೋಗಿಗಳನ್ನು ಸರ್ಕಾರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page