Friday, December 20, 2024

ಸತ್ಯ | ನ್ಯಾಯ |ಧರ್ಮ

ಬಂಧನದಲ್ಲಿರುವ ಸಿಟಿ ರವಿ ತಲೆಯಲ್ಲಿ ಗಾಯ, ಸರ್ಕಾರದ ಷಡ್ಯಂತ್ರ ಎಂದು ಆಕ್ರೋಶ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಬಿಜೆಪಿ ನಾಯಕ ಸಿಟಿ ರವಿ ಅವರನ್ನು ಬೆಳಗಾವಿಯ ಖಾನಾಪುರದ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಈ ನಡುವೆ ಅವರ ತಲೆಯಿಂದ ರಕ್ತ ಸುರಿದಿರುವ ಫೋಟೋ ಒಂದು ವೈರಲ್ ಆಗಿದೆ.

ಸಿಟಿ ರವಿ ಅವರನ್ನು ಖಾನಾಪುರದ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಬಳಿಕ ಬೆಂಗಳೂರಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಈ ವೇಳೆ ಠಾಣೆಯ ಗೇಟ್ ಬಡಿದು ಸಿ.ಟಿ. ರವಿ ಅವರ ತಲೆಗೆ ಗಾಯವಾಗಿದೆ. ಬಳಿಕ ಅವರನ್ನು ಖಾನಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ.

ರಾಮದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸರಿಗೆ ಮೇಲಿಂದ ಮೇಲೆ ಡೈರೆಕ್ಷನ್ ಗಳು ಬರುತ್ತಿವೆ. ಮಾನಸಿಕ ಹಿಂಸೆ ಕೊಡಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಇದೀಗ ಸಿಟಿ ರವಿ ಅವರನ್ನು ಹಿರಿಯ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಅರೆಸ್ಟ್ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page