Saturday, December 21, 2024

ಸತ್ಯ | ನ್ಯಾಯ |ಧರ್ಮ

ಕೇಂದ್ರ ಸಚಿವ ಸಂಪೂಟದಿಂದ ಅಮಿತ್ ಶಾ ವಜಾಕ್ಕೆ ಆಗ್ರಹಿಸಿ, ಅಣುಕು ಶವಯಾತ್ರೆ ದಲಿತ – ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ


ಹಾಸನ: ಭಾರತದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಬಂಧಿಸುವAತೆ ಆಗ್ರಹಿಸಿ ದಲಿತ – ಜನಪರ ಚಳುವಳಿಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದಲ್ಲದೆ ಕೇಂದ್ರ ಗೃಹಮಂತ್ರಿ ಪ್ರತಿಕೃತಿ ಧಹಿಸಿ ಜಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು, ದಲಿತ ಹಿರಿಯ ಮುಖಂಡ ಎಚ್.ಕೆ. ಸಂದೇಶ್ ಮತ್ತು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್ ಮಾತನಾಡಿ, ಇದೆ ವೇಳೆ ಸಿ ಮಾತನಾಡಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಡಿರುವ ಅಪಮಾನಕರ ಮಾತುಗಳು ಅತ್ಯಂತ ಖಂಡನೀಯವಾದುದು. ಈ ಮಾತುಗಳು ಅಮಿತ್ ಶಾ ಅವರ ಮನುವಾದಿ ಮನಸ್ಥಿತಿಯನ್ನು ಎತ್ತಿ ತೋರಿಸುತ್ತದೆ ಹಾಗೂ ಅವರು ಹಿಂದೆಯೂ ಈಗಲೂ ಮುಂದೆಯೂ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಒಪ್ಪಿಕೊಳ್ಳುವುದಿಲ್ಲ ಎನ್ನುವುದು ಸಾಬೀತಾಗುತ್ತದೆ. ಇಂತಹ ಮನುವಾದಿ ಮನಸ್ಥಿತಿಯ ಅಮಿತ್ ಶಾ ಭಾರತದ ಗೃಹ ಸಚಿವರಾಗಿ ಮುಂದುವರಿದರೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಅವರ ಆಶಯಗಳಿಗೆ ವಿರುದ್ಧವಾಗುತ್ತದೆ. ಹಾಗೂ ಭಾರತದ ಸಂವಿಧಾನದ ಮೂಲ ತತ್ವಗಳಿಗೆ ದಕ್ಕೆಯಾಗುತ್ತದೆ ಎಂದರು. ಭಾರತದ ಸಂವಿಧಾನದ 75ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ದೇಶದ ರಾಜ್ಯ ಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ ಭಾರತದ ಸಂವಿಧಾನ ಶಿಲ್ಪಿ ಬಾಬಾಸಾಹೆಬ್ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಅಮಿತ್ ಶಾ ಅವರು ಆಡಿರುವ ಅಪಮಾನಕರ ಮಾತುಗಳು ಕೇವಲ ಆಕಸ್ಮಿಕವೇನೂ ಅಲ್ಲ.

ಸಂವಿಧಾನದ ಕುರಿತ ಚರ್ಚೆಯ ಸಂದರ್ಭದಲ್ಲಿಯೇ ಸಂವಿಧಾನ ಶಿಲ್ಪಿಗೆ ಅವಮಾನ ಮಾಡುವುದು ಅವರ ನೈಜ ಉದ್ದೇಶವಾಗಿತ್ತು. ಅಮಿತ್ ಶಾ ಪ್ರತಿನಿಧಿಸುವ ಆರ್‌ಎಸ್‌ಎಸ್, ಜನಸಂಘ ಮತ್ತು ಬಿಜೆಪಿ ಭಾರತ ದೇಶವನ್ನು ಸಾರ್ವಭೌಮ ಸಮಾಜವಾದಿ ಮತಧರ್ಮ ನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯ ಎಂದು ನಿರೂಪಿಸುವ ಭಾರತದ ಸಂವಿಧಾನ ಮತ್ತು ಅದರ ರಚನೆಗೆ ಅತ್ಯಂತ ಮಹತ್ವದ ಕೊಡುಗೆ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಆರಂಭದಿAದಲೂ ತೀವ್ರ ಅಸಮಾಧಾನ ಮತ್ತು ಅತೃಪ್ತಿಯನ್ನು ಹೊರಹಾಕಿರುವುದು ಇಡೀ ದೇಶಕ್ಕೇ ಗೊತ್ತಿರುವ ಇತಿಹಾಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ಅವರ ಜಾತಿ ಹಿನ್ನೆಲೆಯನ್ನು ಎತ್ತಿ ತೋರಿಸುತ್ತಾ ಅಂಬೇಡ್ಕರ್ ಅವರು ಸಂವಿಧಾನ ಬರೆಯಲೇ ಇಲ್ಲ ಎನ್ನುವ ಸುಳ್ಳುಗಳನ್ನು ಪ್ರಚಾರ ಮಾಡುವುದರ ಜೊತೆಗೆ ಅಂಬೇಡ್ಕರ್ ಅವರು ರಚಿಸಿರುವ ಭಾರತದ ಸಂವಿಧಾನವನ್ನು ತಾನು ಒಪ್ಪುವುದೂ ಇಲ್ಲ ಎನ್ನುವುದನ್ನು ಆರ್‌ಎಸ್‌ಎಸ್ ಆಗ ಬಹಿರಂಗವಾಗಿಯೇ ಹೇಳಿತ್ತು. ಅಂತಹ ಸಂಘಪರಿವಾರ ಮತ್ತು ಬಿಜೆಪಿಯ ಅಮಿತ್ ಶಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ಅಪಮಾನಕರವಾದ ಮಾತುಗಳು ಅವರ ಮನುವಾದಿ ಪರಂಪರೆಯ ಮುಂದುವರಿಕೆಯ ಭಾಗವಾಗಿಯೇ ಬಂದಿವೆ. ಇದು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಭಾರತದ ಸಂವಿಧಾನಕ್ಕೆ ಆಗಿರುವ ಅತ್ಯಂತ ಘೋರ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ ಮನುವಾದಿ ಅಮಿತ್ ಶಾ ಅವರನ್ನು ಕೂಡಲೇ ಕೇಂದ್ರ ಸಚಿವ ಸಂಪುಟದಿAದ ವಜಾಗೊಳಿಸಬೇಕು ಹಾಗೂ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಯನ್ನು ಅವಮಾನಿಸಿದ ಅವರ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಬೇಕೆಂದು ಆಗ್ರಹಿಸಿದರು. ಹಾಸನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ಭಾರತದ ಮಾನ್ಯ ರಾಷ್ಟ್ರಪತಿ ಮತ್ತು ಮಾನ್ಯ ಪ್ರಧಾನ ಮಂತ್ರಿಯವರನ್ನು ಈ ಮೂಲಕ ಆಗ್ರಹಪೂರ್ವಕವಾಗಿ ಒತ್ತಾಯಪಡಿಸುತ್ತಿರುವುದಾಗಿ ಹೇಳಿದರು.
ಪ್ರತಿಭಟನೆಯಲ್ಲಿ ಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ದಲಿತ ಹಿರಿಯ ಮುಖಂಡ ಎಚ್.ಕೆ. ಸಂದೇಶ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ. ಸೋಮಶೇಖರ್, ಹಿರಿಯ ರಂಗಕರ್ಮಿ ಪ್ರಸಾದ್ ರಕ್ಷಿದಿ, ಮಾದಿಗ ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯಕುಮಾರ್, ದಸಂಸ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಈರೇಶ್ ಹಿರೇಹಳ್ಳಿ, ದಲಿತ ಹಿರಿಯ ಮುಖಂಡರು ಕೃಷ್ಣದಾಸ್, ರಾಜಶೇಖರ್, ಡಿಎಚ್‌ಎಸ್ ಸಂಚಾಲಕ ಎಂ.ಜಿ. ಪೃಥ್ವಿ, ಸಂವಿಧಾನ ಓದು ಅಭಿಯಾನದ ರಾಜು ಗೊರೂರು, ಆಜಾದ್ ಟಿಪ್ಪು ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮುಬಶಿರ್ ಅಹಮದ್, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್, ಹಿರಿಯ ಕಲಾವಿದ ಗ್ಯಾರಂಟಿ ರಾಮಣ್ಣ ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page