Thursday, January 2, 2025

ಸತ್ಯ | ನ್ಯಾಯ |ಧರ್ಮ

ಇಂದು ಮಹತ್ವದ ಸಚಿವ ಸಂಪುಟ ಸಭೆ ಕರೆದ ಸರ್ಕಾರ

ರಾಜ್ಯ ಸರ್ಕಾರ ಇಂದು ಮಹತ್ವದ ಸಚಿವ ಸಂಪುಟ ಸಭೆ ಕರೆದಿದ್ದು, ಈ ವೇಳೆ ರಾಜ್ಯದ ಅಭಿವೃದ್ಧಿ ಕೆಲಸ ಮತ್ತು ಹಲವು ಮಹತ್ವದ ವಿಚಾರಗಳ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ಮಾತುಕತೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿಗಳಾದ ಆರ್ ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸೂಚನ ಪತ್ರದಲ್ಲಿ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page