Tuesday, January 7, 2025

ಸತ್ಯ | ನ್ಯಾಯ |ಧರ್ಮ

ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕೊಡಗು ಸೈನಿಕ ಶಾಲೆಯಲ್ಲಿ 6ನೇ ತರಗತಿ(ಹುಡುಗ ಮತ್ತು ಹುಡುಗಿಯರು) ಹಾಗೂ 9 ನೇ ತರಗತಿ(ಹುಡುಗರು ಮಾತ್ರ)ಯ ಪ್ರವೇಶಕ್ಕಾಗಿ ಅರ್ಜಿ ಕರೆಯಲಾಗಿದ್ದು ಜ.13 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಮಾತ್ರ ಸಲ್ಲಿಸಬಹುದು. ಹಾಗೂ ಲಿಖಿತ ಪರೀಕ್ಷೆಯ ದಿನಾಂಕವನ್ನು ಎನ್‌ಟಿಎ ಜಾಲತಾಣದಲ್ಲಿ ನಂತರ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಎಂಬ ಜಾಲತಾಣವನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ(ಪ್ರ) ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page