ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶಾ ಹೇಳಿಕೆ ಖಂಡಿಸಿ ದಲಿತ ಸಂಘನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ, ಬಂಧನ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ದೇಶ, ರಾಜ್ಯ

• 2 ನಿಮಿಷದ ಓದು

ಶಾ ಹೇಳಿಕೆ ಖಂಡಿಸಿ ದಲಿತ ಸಂಘನೆಗಳಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ, ಬಂಧನ

ಹಾಸನ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ ಹಾಸನದ ಭುವನಹಳ್ಳಿ ಬೈಪಾಸ್ ಬಳಿ ವಿವಿಧ ದಲಿತ ಪರ ಸಂಘಟನೆಗಳು ರಾಷ್ಟಿಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಸಂಘಟನೆಗಳ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ನಡೆಯಿತು.ಪ್ರತಿಭಟನೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಬಿಜೆಪಿ ಹಾಗೂ ಗೃಹ ಸಚಿವ ಅಮಿತ್ ಷಾ ವಿರುದ್ಧ ಘೋಷಣೆ ಕೂಗುವ ಮೂಲಕ ಅಮಿತ್ ಶಾ ರಾಜಿನಾಮೆಗೆ ಪ್ರತಿಭಟನಾಕಾರರು ಆಗ್ರಹಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ನಕ್ಸಲರ ಬಂಧಿಸಿ ಇದೆ ಹೆದ್ದಾರಿಯಲ್ಲಿ ಪೊಲೀಸ್ ವಾಹನ ಹೋಗುವದರಿಂದ ಹತ್ತು ನಿಮಿಷ ಮೊದಲೆ ಪ್ರತಿಭಟಗಾರರನ್ನು ಬಂಧಿಸಿ, ಪ್ರತಿಭಟನೆ ತೆರವು ಮಾಡಿಸಿದರು.ರಸ್ತೆ ತಡೆಗೂ ಮುನ್ನ ಬಹಿರಂಗ ಸಭೆ ನಡೆಸಿ ಮಾತನಾಡಿದ ಸಿಐಟಿಯು ಮುಖಂಡ ಧರ್ಮೇಶ್ ಹಾಗೂ ಜೈ ಭೀಮ್ ಬ್ರಿಗೇಡ್ ಜಿಲ್ಲಾದ್ಯಕ್ಷ ರಾಜೇಶ್, ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗೆ ಸಂಸತ್ ನಲ್ಲಿ ವ್ಯಂಗ್ಯವಾಗಿ ಮಾತನಾಡುವ ಜೊತೆಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಬದಲು ದೇವರ ನಾಮ ಜಪ ಮಾಡಿದ್ದರೆ ಮೋಕ್ಷ ಸಿಗುತ್ತಿತ್ತು ಎಂಬ ಮಾತನ್ನು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಶಾ ಅಪಾಮನ ಮಾಡಿದ್ದಾರೆ ಅವರ ಸಂವಿಧಾನದ ಆಧಾರದ ಮೇಲೆ ಸಚಿವರಾಗಿರುವ ಶಾ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೆಡಬೇಕು ಎಂದು ಆಗ್ರಹಿಸಿದರು.

ಅಂಬೇಡ್ಕರ್ ಎಂಬುದು ಒಂದು ವಿಚಾರ ಅವರ ಬಗ್ಗೆ ನಾಲಿಗೆ ಹರಿಬಿಡುವ ಮುನ್ನ ಎಚ್ಚರಿಕೆ ಇರಬೇಕು, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾ ಗೊಳಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಹಾಸನ್ ಬಂದೆ ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಕನಿಷ್ಠ ತಾವು ಹೇಳಿದ ಮಾತಿಗೆ ಅಮಿತ್ ಶಾ ಅವರು ಕ್ಷಮೆ ಕೇಳುವ ಸೌಜನ್ಯವನ್ನು ತೋರಿಸಿಲ್ಲ ಅವರ ಉದ್ಧಟತನಕ್ಕೆ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ತಮ್ಮ ಹೋರಾಟದ ಮೂಲಕವೇ ಉತ್ತರ ನೀಡಲಿವೆ. ಅವರು ತಮ್ಮ ಸ್ಥಾನದಲ್ಲಿ ಮುಂದುವರೆದರೆ ಸಂವಿಧಾನಕ್ಕೆ ವಿರುದ್ಧವಾದ ನಡವಳಿಕೆಗಳನ್ನು ಮುಂದುವರಿಸುತ್ತಲೇ ಇರುತ್ತಾರೆ ಆದುದರಿಂದ ಅವರಿಗೆ ತಕ್ಕ ಪಾಠ ಕಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಶಾ ವಿರುದ್ಧ ಕ್ರಮ ಕೈಗೊಳ್ಳುವ ಬದಲಾಗಿ ಅವರ ಪರವಾಗಿಯೇ ಮಾತನಾಡುವ ಮೂಲಕ ಸಂವಿಧಾನದ ಆಶಯಗಳಿಗೆ ಅಪಚಾರ ಮಾಡುವ ಕೆಲಸ ಮಾಡಿದ್ದಾರೆ. ಇದು ಸಂವಿಧಾನದ ಬಗ್ಗೆ ಬಿಜೆಪಿ ಸರ್ಕಾರದ ನಿಲುವನ್ನು ಸೂಚಿಸುತ್ತದೆ. ಈ ಬಗ್ಗೆ ಈಗಾಗಲೇ ದೇಶದ ಮೂಲೆ ಮೂಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ ಆದರೂ ಈ ವರೆಗೆ ಶಾ ವಿರುದ್ಧ ಕ್ರಮ ಜರುಗಿಸದೆ ಇರುದು ವಿಜೆಪಿಯ ಸಂವಿಧಾನ ವಿರೋಧಿ ನೀತಿಯನ್ನು ಸೂಚಿಸುತ್ತದೆ ಎಂದು ಕಿಡಿ ಕಾರಿದರು.

ಪ್ರತಿಭಟನೆಯಲ್ಲಿ ದಸಂಸ ಮುಖಂಟಾದ ಎಚ್.ಕೆ ಸಂದೇಶ್, ಸಿಐಟಿಯು ಧರ್ಮೇಶ್,ಜಗದೀಶ್, ಎಂ.ಸೋಮಶೇಖರ್, ದಂಡೋರ ವಿಜಯ್ ಕುಮಾರ್, ಅಂಬುಗೆ ಮಲ್ಲೇಶ್, ಜೈ ಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ಮಲ್ಲಿಗೆ ವಾಳು ದೇವಪ್ಪ, ಅಬ್ದುಲ್ ಸಮದ್, ದೇವರಾಜ್, ಈರೇಶ್ ಈರೆಹಳ್ಳಿ, ಕೃಷ್ಣದಾಸ್, ವಿಠಲ್, ನವೀನ್, ಅರವಿಂದ್, ಇರ್ಷಾದ್, ಕುಮಾರಸ್ವಾಮಿ, ಇತರರು ಇದ್ದರು.

ವಿಷಯಗಳು: #kannada #news #peepal #peepalmedia #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು