Tuesday, January 14, 2025

ಸತ್ಯ | ನ್ಯಾಯ |ಧರ್ಮ

ರಸ್ತೆ ಅಪಘಾತ: ಸಚಿವೆ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಹಟ್ಟಿಹೊಳಿಗೆ ಗಾಯ

ಬೆಳಗಾವಿ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನಮ್ಮ ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಮಂಗಳವಾರ ಬೆಳಗಿನ ಜಾವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಪ್ರಯಾಣಿಸುತ್ತಿದ್ದ ಎಸ್‌ಯುವಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ.

ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಹಟ್ಟಿಹೊಳಿ ಬೆಂಗಳೂರಿನಿಂದ ಬೆಳಗಾವಿಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಮೂಲಗಳು ತಿಳಿಸಿರುವ ಪ್ರಕಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page