Saturday, January 18, 2025

ಸತ್ಯ | ನ್ಯಾಯ |ಧರ್ಮ

ಜಾತಿಗಣತಿ ವರದಿ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ : ಸಿಎಂ ಸಿದ್ದರಾಮಯ್ಯ

ಮಂಗಳೂರು, ಜನವರಿ 17: ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಾತಿ ಗಣತಿ ವರದಿ: ವಿರೋಧ ಏಕೆ?

ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು

ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.

ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ

ಉಲ್ಲಾಳ್ ನಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page